ಗರ್ಭಿಣಿಯರಿಗಾಗಿ ಸೀಮಂತ ಕಾರ್ಯಕ್ರಮ

Published on

ಪಟ್ಟಣದ ಗುರುಭವನದಲ್ಲಿ

ಮೈಸೂರು ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ‌ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಮಂಗಳವಾರ ಅಂತರ ರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಆರೋಗ್ಯ ಕುರಿತ ವಿಶೇಷ ಕಾರ್ಯಕ್ರಮ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜನ ಸಂಪರ್ಕ ಕಾರ್ಯಾಲಯದ ಉಪ ನಿರ್ದೇಶಕಿ ಪೂರ್ಣಿಮಾ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳಾ ದಿನಾಚರಣೆಯನ್ನು ಹಬ್ಬ ಉಪ ಹಾದಿಯಲ್ಲಿ ಕೊಂಡೊಯ್ಯುವ ಜತೆಗೆ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದೇ ವೇಳೆ ಮಹಿಳೆಯರ ಆರೋಗ್ಯ ತಪಾಸಣೆ‌ ಮಾಡಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಡಾ.ಗೋಪಾಲ್, ಸಿಡಿಪಿಒ ನಾಗೇಶ್, ಎಸಿಡಿಪಿಒ ದೀಪಾ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net