ಗಾಂಜಾ ಮಾರುತ್ತಿದ್ದ ಮೂವರ ಬಂಧನ

file79dgbf3jbx31dc7fu66w016345834171666962237
Published on

ಮೈಸೂರು: ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1.5 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೀವ್‌ನಗರ 1ನೇ ಹಂತದಲ್ಲಿರುವ ನಿಮ್ರಾ ಮಸೀದಿ ಮುಖ್ಯರಸ್ತೆಯಲ್ಲಿ ಫೆ.10ರಂದು ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿ, 860 ಗ್ರಾಂ ಗಾಂಜಾ, 17 ಸಾವಿರ ರೂ. ನಗದು ಹಾಗೂ ಒಂದು ದ್ವಿಚಕ್ರ ವಾಹನ, ಮೊಬೈಲ್ ಜಪ್ತಿ ಮಾಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮತ್ತೊಂದು ಪ್ರಕರಣದಲ್ಲಿ ನಗರದ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿಷನ್ ಆಸ್ವತ್ರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಆತನಿಂದ 620 ಗ್ರಾಂ ಗಾಂಜಾ, ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net