ಗಾಂಧೀಜಿ ತತ್ವದರ್ಶ ಇಂದಿಗೂ ಪ್ರಸ್ತುತ

07 TTH 04 kimane
ಕೋಣಂದೂರಿನ ಶರಾವತಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಗೌರವಿಸಲಾಯಿತು. ಜಿ.ಎಸ್.ನಾರಾಯಣ ರಾವ್, ಪ್ರೊ. ಎಂ.ಜಿ.ಸುಭಾಷ್, ಬಿ.ಪ್ರಕಾಶ್ ಇತರರಿದ್ದರು.
Published on

ತೀರ್ಥಹಳ್ಳಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ತತ್ವಗಳಾದ ಸರ್ವಧರ್ಮ, ಸಮಭಾವ, ಸ್ವದೇಶಿ ಪರಿಕಲ್ಪನೆ ಇಂದಿಗೂ ಪ್ರಸ್ತುತ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಕೋಣಂದೂರಿನ ಶರಾವತಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧೀಜಿ ಕುರಿತು ವಿಶೇಷ ಉಪನ್ಯಾಸ ನೀಡಿ, ಮೌಲ್ಯವಿಲ್ಲದ ಜೀವನ ಅರ್ಥಹೀನ ಎಂಬುದು ಮಹಾತ್ಮರ ನಿಲುವಾಗಿತ್ತು. ತಮ್ಮ ಜೀವನದುದ್ದಕ್ಕೂ ಅವರು ಪ್ರತಿಪಾದಿಸಿದ ಸತ್ಯ, ಅಹಿಂಸೆ, ಪ್ರಾಮಾಣಿಕತೆಯನ್ನು ಯುವಜನರು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಗಾಂಧೀಜಿ ಅವರ ಜೀವನ ಅತ್ಯಂತ ಸರಳ ಮತ್ತು ಪಾರದರ್ಶಕವಾಗಿತ್ತು. ಪ್ರಸ್ತುತ 100ಕ್ಕೂ ಹೆಚ್ಚು ದೇಶಗಳಲ್ಲಿ ಮಹಾತ್ಮರ ಅಧ್ಯಯನ ಪೀಠಗಳು ಸ್ಥಾಪನೆಯಾಗಿವೆ. 140ಕ್ಕೂ ಹೆಚ್ಚಿನ ದೇಶಗಳು ಗಾಂಧಿ ಅವರ ಹೆಸರಿನಲ್ಲಿ ಅಂಚೆ ಚೀಟಿ ಮತ್ತು ನಾಣ್ಯಗಳನ್ನು ಬಿಡುಗಡೆ ಮಾಡಿದೆ. ಅವರ ಪ್ರತಿಮೆ ಸ್ಥಾಪಿಸಿ ಗೌರವವನ್ನು ನೀಡಿರುವುದು ಭಾರತೀಯರಾದ ನಮಗೆ ಹೆಮ್ಮೆಯ ಸಂಗತಿ ಎಂದರು.

ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಶರಾವತಿ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ಜಿ.ಸುಭಾಷ್, ಪ್ರಾಧ್ಯಾಪಕ ಬಿ.ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net