

ಬಣಕಲ್: ಉದುಸೆ ಗ್ರಾಮದ ಮನೆಯೊಂದರ ಸಮೀಪ ನಿರ್ಮಾಣ ಹಂತದಲ್ಲಿದ್ದ ಶೌಚಗೃಹದ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯನ್ನು ರಕ್ಷಣೆ ಮಾಡಲಾಯಿತು. ಜಿಂಕೆಯೊಂದು ಗಾಯಗೊಂಡಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಕಾವ್ಯಾ, ಉಪವಲಯ ಅರಣ್ಯಾಧಿಕಾರಿ ರವಿರಾಜ್ ಜಿಂಕೆಯನ್ನು ರಕ್ಷಣೆ ಮಾಡಿದರು. ಬಣಕಲ್ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪೂಜಾ ಮತ್ತು ಸಹ ಪಶುವೈದ್ಯ ಡಾ. ಮಸಿಯಣ್ಣ ಜಿಂಕೆಗೆ ಚಿಕಿತ್ಸೆ ನೀಡಿದರು. ಚೇತರಿಸಿಕೊಂಡ ಜಿಂಕೆಯನ್ನು ಅರಣ್ಯಕ್ಕೆ ಬಿಡಲಾಯಿತು. ಅರಣ್ಯ ಕ್ಷೇಮಾಭಿವೃದ್ಧಿ ನೌಕರ ಉದಯ್ ಹಾಗೂ ಗ್ರಾಪಂ ಸದಸ್ಯೆ ಇಂದ್ರಮ್ಮ ರಾಜೇಗೌಡ, ಗ್ರಾಮಸ್ಥ ಮಧು ಇತರರಿದ್ದರು.