

ಬೈಲಕುಪ್ಪೆ: ಇಲ್ಲಿನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಗೀತಾ ರಾಮು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಯಂತು ಸೋಮವಾರ ಘೋಷಿಸಿದರು.
ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಭಾರತೀ ಪ್ರಕಾಶ್ ಒಪ್ಪಂದದಂತೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗದಿ ಮಾಡಲಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ರಾಮು ಒಬ್ಬರೇ ನಾಮಪತ್ರ ಸಲ್ಲಿಸಿ, ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಊರ್ಜಿತಗೊಳಿಸಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬೋರೇಗೌಡ, ಸದಸ್ಯರಾದ ರಘು. ನಿಸಾರ್ ಅಹಮದ್. ನವೀನ್, ರಘು, ಶಿವಮ್ಮ, ಗೀತಾ ಸುಬ್ರಹ್ಮಣ್ಯ, ರಾಜು, ಜವರಯ್ಯ, ಮಂಜು, ನಂಜುಂಡ, ರೇಣುಕಮ್ಮ, ಲಕ್ಷ್ಮಮ್ಮ, ಪದ್ಮಾವತಿ, ಮಂಜುಳಾ, ಮುತ್ತುರಾಜ್, ಹರೀಶ, ಪೊಲೀಸ್ ಸಿಬ್ಬಂದಿ ಇದ್ದರು.