ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

Application
Published on

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ನೀಡಲಾಗಿರುವ 35 ಶುಶ್ರೂಷಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಜುಲೈ 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 4.30 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ನಾಗಮ್ಮ ಆಸ್ಪತ್ರೆ ಆವರಣ ನಜರ್‌ಬಾದ್, ಮೈಸೂರು ಇಲ್ಲಿ ನೇರ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗುವುದು.

 ಆಸಕ್ತ ಅಭ್ಯರ್ಥಿಗಳು ಸದರಿ ದಿನಾಂಕದoದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ https://mysore.nic.in/  ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net