ಗುತ್ತಿಗೆ ಕಾರ್ಮಿಕರಿಂದ ಪೇಜಾವರ ಶ್ರೀ ಭೇಟಿ

10bdvt2 VISL
ಭದ್ರಾವತಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರು ಉಡುಪಿ ಪೇಜಾವರ ಮಠದ ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಕಾರ್ಖಾನೆ ವಿಚಾರ ಪ್ರಸ್ತಾಪಿಸಿದರು.ಸುರೇಶ್,ಮಂಜುನಾಥ್, ರಾಕೇಶ್, ಮಂಜುನಾಥ್, ಆನಂದ್ ಇತರರಿದ್ದರು.
Published on

ಭದ್ರಾವತಿ: ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರು ಮಂಗಳವಾರ ಉಡುಪಿ ಪೇಜಾವರ ಮಠದ ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದರು.

ಕಳೆದೆರಡು ದಿನಗಳ ಹಿಂದೆ ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಹಾಗೂ ಸೈಲ್ ಚೇರ್ಮನ್ ಅಮರೇಂದು ಪ್ರಕಾಶ್ ಕಾರ್ಖಾನೆಗೆ ಭೇಟಿ ನೀಡಿದ್ದ ವಿಚಾರವನ್ನು ಈ ಸಂದರ್ಭದಲ್ಲಿ ಕಾರ್ಮಿಕರು ಪ್ರಸ್ತಾಪಿಸಿದರು. ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ ಹೂಡಿದ್ದಲ್ಲಿ ಕಾರ್ಖಾನೆ ಪುನಶ್ಚೇತನಗೊಳ್ಳುವುದರೊಂದಿಗೆ ಕಾರ್ಮಿಕರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಈ ನಿಟ್ಟಿನಲ್ಲಿ ತಮ್ಮ ಪ್ರಯತ್ನವೂ ಅಗತ್ಯ ಎಂದು ಮನವರಿಕೆ ಮಾಡಿಕೊಟ್ಟರು. ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ ಮಾತನಾಡಿ, ಸುಮಾರು 2 ವರ್ಷಗಳ ಹಿಂದೆಯೇ ಕಾರ್ಖಾನೆಗೆ ಒಳ್ಳೆಯದಾಗುವ ವಿಚಾರವನ್ನು ನಿಮಗೆ ತಿಳಿಸಿದ್ದೆ. ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಅಭಿವೃದ್ಧಿಯ ಪಥದಲ್ಲಿ ಸಾಗುವ ಮೂಲಕ ಗುತ್ತಿಗೆ ಕಾರ್ಮಿಕರ ಸಮಸ್ಯೆಯೂ ದೂರವಾಗುತ್ತದೆ. ಈ ನಿಟ್ಟಿನಲ್ಲಿ ಸಂಸದರು ಹಾಗೂ ಸಚಿವರ ಬಳಿ ಮಾತನಾಡುತ್ತೇನೆ ಎಂದು ಆಶೀರ್ವದಿಸಿದರು. ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಾಕೇಶ್, ಸಹಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಆನಂದ್, ನಿವೃತ್ತ ಕಾರ್ಮಿಕ ನರಸಿಂಹಾಚಾರ್ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net