ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ / ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಸಂವಿಧಾನದ ಬಗ್ಗೆ ಗೌರವ ಇದ್ದರೆ ಗುತ್ತಿಗೆದಾರ ಸಾವಿಗೆ ಕಾರಣವಾದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲಿ ಎಂದು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.

ಮುಖಂಡ ಯಲುವಗುಳಿ ನಾಗರಾಜ್ ಮಾತನಾಡಿ, ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್‌ಖರ್ಗೆ ಅವರ ಪಾತ್ರವಿರುವುದು ಸ್ಪಷ್ಟವಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಈಶ್ವರಪ್ಪ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಿದ್ದಾರೆ. ನಿಮಗೆ ಏನಾದರೂ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು. ಮಾತಲ್ಲಿ ಸಂವಿಧಾನ ಅಂಬೇಡ್ಕರ್ ಇದ್ದರೆ ಅಷ್ಟೇ ಸಾಲದು ನಡುವಳಿಕೆಯಲ್ಲಿ ಸಹ ಇರಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆ, ರಾಜರಾಜೇಶ್ವರಿ ನಗರದಲ್ಲಿ ಮಾಜಿ ಸಚಿವ ಮುನಿರತ್ನ ಮೇಲೆ ಹಲ್ಲೆ, ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಾಗಿದೆ. ಇನ್ನೂ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರಕ್ಕೆ ಗೌರವ ಇದ್ದರೆ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.

ಮುಖಂಡರಾದ ಜಯನಗರ ಮುನಿಯಪ್ಪ, ಹಾರೋಹಳ್ಳಿ ನಾಗರಾಜ್ ಇದ್ದರು.

ಚಿತ್ರ ೩೦ ಕೆ.ಎಲ್.ಆರ್. ೦೩ : ಪ್ರಿಯಾಂಕಖರ್ಗೆ ರಾಜಿನಾಮೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ಒತ್ತಾಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net