ಗೂಂಡಾ ಕಾಯ್ದೆಯಡಿ ರೌಡಿ ವಿಷ್ಣು ಸೆರೆ

prajavani_2024-09-18_1pz8prml_deccanherald_import_sites_dh_files_article_images_2019_10_12_Arrest-1570847915.jpeg
Published on

ಬೆಂಗಳೂರು: ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ರೌಡಿಶೀಟರೊಬ್ಬನನ್ನು ಗೂಂಡಾ ಕಾಯ್ದೆಯಡಿ ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನ್ಯೂ ಬಿನ್ನಮಂಗಲನಗರ ನಿವಾಸಿ ವಿಷ್ಣು(೨೩) ಬಂಧಿತ ರೌಡಿ. ೨೦೧೮ ರಿಂದಲೂ ಈತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಈತನ ವಿರುದ್ಧ ಕೊಲೆ, ಸುಪಾರಿ ಕೊಲೆ, ಕೊಲೆ ಪ್ರಯತ್ನ, ಹಲ್ಲೆ, ಸುಲಿಗೆ, ವಾಹನ ಕಳವು ಸೇರಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ೧೧ ಅಪರಾಧ ಪ್ರಕರಣಗಳು ದಾಖಲಾಗಿವೆ. ಆರೋಪಿಯು ಕೆಲ ಪ್ರಕರಣಗಳಲ್ಲಿ ಜಾಮೀನು ಪಡೆದು ಬಿಡುಗಡೆಗೊಂಡು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ನಡುವೆ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ. ಈತನ ತಂದೆ ಹಾಗೂ ತಮ್ಮ ಸಹ ರೌಡಿ ಶೀಟರ್‌ಗಳಾಗಿದ್ದು, ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ರೌಡಿ ವಿಷ್ಣುನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಇಂದಿರಾನಗರ ಠಾಣೆ ಪೊಲೀಸರು ನಗರ ಪೊಲೀಸ್ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ನಗರ ಪೊಲೀಸ್ ಆಯುಕ್ತರ ಸಮ್ಮಿತಿ ಮೇರೆಗೆ ರೌಡಿ ವಿಷ್ಣುನನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಲಬುರಗಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net