

ಚಿತ್ರದುರ್ಗ: ರಾಜ್ಯ ಚುನಾವಣಾ ಆಯೋಗ ಚಿತ್ರದುರ್ಗ ಜಿಲ್ಲೆಯ ಗ್ರಾಪಂಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ಮೇ 8 ರಿಂದ 28 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಗುರುವಾರ ಅಧಿಸೂಚನೆ ಹೊರಡಿಸಲಾಗಿದೆ. 14 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 15 ರಂದು ನಾಮಪತ್ರಗಳ ಪರಿಶೀಲನೆ ಹಾಗೂ 17 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.
ಮೇ 25 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕತೆ ಇದ್ದರೆ 27 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. 28 ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಅಂದೇ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
-