ಗ್ರಾಮಗಳ ಅಭಿವೃದ್ಧಿಗೆ ಅನುದಾನ ಬಳಕೆ

2BANNU1
ಕೊಡಗಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದ ಸುಮಾ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
Published on

ಬನ್ನೂರು: ಸರ್ಕಾರದಿಂದ ಬರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಕೊಡಗಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮಾ ಹೇಳಿದರು.

ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮಾಭಿವೃದ್ಧಿ ಗಾಂಧೀಜಿ ಅವರ ಕನಸಿನ ಕೂಸು. ಗ್ರಾಮಗಳು ಅಭಿವೃದ್ಧಿಯಾಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದನ್ನು ಬಹಳಷ್ಟು ಹಿಂದೆಯೇ ಗಾಂಧೀಜಿ ತಿಳಿಸಿದ್ದರೂ, ಇಂದಿಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕನಸಾಗಿಯೇ ಉಳಿದಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಕ್ಷೇತ್ರದ ಶಾಸಕರಿಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಪಂಚಾಯಿತಿ ಸದಸ್ಯರಾದ ಕೆ.ಎಸ್. ಧನಂಜಯ್, ಕೆ.ಎಸ್.ಮಹೇಶ್, ಕಮಲಮ್ಮ, ಪುಟ್ಟಸ್ವಾಮಿ, ಶಿವರಾಜು, ರಮೇಶ್, ವೀಣಾ ಗುತ್ತಿಗೆದಾರ ಗಿರೀಶ್, ಹಿರಿಯ ಕಾಂಗ್ರೆಸ್ ಮುಖಂಡ ಚಡ್ಡಿ ಸಣ್ಣಪ್ಪ, ನಾಗೇಶ್, ಮಗ್ಗದ ಮಹದೇವ, ಪುಟ್ಟಮಾದ, ತಮಟೆಸ್ವಾಮಿ, ಶಿವಕುಮಾರ್, ಅರ್ಜುನ್, ಮನು, ಜೋಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net