ಗ್ರಾಮೀಣ ಜನರ ಬದುಕಿಗೆ ಹೈನುಗಾರಿಕೆ ಸಹಕಾರಿ

1091060
Published on

ರಾವಂದೂರು: ಗ್ರಾಮೀಣ ಜನರ ಉತ್ತಮ ಬದುಕಿಗೆ ಹೈನುಗಾರಿಕೆ ತುಂಬ ಸಹಕಾರಿಯಾಗಿದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕು ಕುಡುಕೂರು ಕೊಪ್ಪಲಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿ, ಹೈನುಗಾರಿಕೆ ಗ್ರಾಮೀಣ ಜನರ ಉತ್ತಮ ಬದುಕಿಗೆ ತುಂಬ ಸಹಕಾರಿಯಾಗಿದೆ. ರೈತರು ಉಪಕಸುಬುಗಳನ್ನು ಅಳವಡಿಸಿಕೊಳ್ಳಬೇಕು. ರೇಷ್ಮೆ ಬೆಳೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು. ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಗ್ರಾಮದ ಮುಖಂಡ ರವಿಕುಮಾರ್ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ.ಹೊಲದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಎಂಡಿ ಸಿಸಿ ಬ್ಯಾಂಕ್ ನಿರ್ದೇಶಕ ಈಚೂರ್ ಲೋಕೇಶ್, ಸಚಿನ್, ಡಿ.ಎಸ್.ನಂದೀಶ್, ಕೀರ್ತಿ, ಸಹಕಾರ ಇಲಾಖೆ ಮೇಲ್ವಿಚಾರಕ ಯತೀಂದ್ರ, ನಿಶ್ಚಿತ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಸ್ವಾಮಿಗೌಡ, ವಿಜೇಂದ್ರ, ಕಾರ್ಯದರ್ಶಿ ಪುನೀತ್, ಸಚಿವರ ಆಪ್ತ ಕಾರ್ಯದರ್ಶಿ ಮಹೇಂದ್ರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net