ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

Application
Published on

ವಿಕಲಚೇತನರ ಹಾಗೂ ಹಿರಿಯ ಸಬಲೀಕರಣ ಇಲಾಖೆಯ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮದಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕಿನ ಪಡುಕೋಟೆ ಕಾವಲ್, ಜಿ.ಬಿ.ಸರಗೂರು, ತುಂಬಸೋಗೆ ಗ್ರಾಮ/ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಯರ್ತರಾಗಿ ಮಾಸಿಕ ರೂ. 10000/- ಗಳ ಗೌರವಧನದ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

 ಅರ್ಹ ಸಮರ್ಥ ವಿಕಲಚೇತನ ವ್ಯಕ್ತಿಗಳು ಅರ್ಜಿ ನಮೂನೆಯನ್ನು ಸಂಬoಧಪಟ್ಟ ತಾಲ್ಲೂಕು ಪಂಚಾಯಿತಿಯಲ್ಲಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ಪಡೆದು ಭರ್ತಿ ಮಾಡಿ ಅರ್ಜಿಗಳನ್ನು ಸೆಪ್ಟೆಂಬರ್ 15 ರೊಳಗಾಗಿ ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಾಗಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಸ್.ಎಸ್.ಮಹದೇವಯ್ಯ ಅವರ ದೂ.ಸಂ: 9611519719 ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net