ಚನ್ನಕೇಶವಸ್ವಾಮಿ ದೇಗುಲಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚನ್ನಕೇಶವಸ್ವಾಮಿ ದೇಗುಲಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published on

ಬೇಲೂರು: ಬೇಲೂರು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿಯ ಜನಸಂಕಲ್ಪ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.


ನಂತರ ದೇಗುಲದಲ್ಲಿನ ಸುಂದರ ಶಿಲ್ಪಕಲೆಗಳನ್ನು ವೀಕ್ಷಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೇಲೂರು ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವ ನಿರೀಕ್ಷೆ ಇದೆ. ಆದರೆ ದೇಗುಲ ಸೇರ‌್ಪಡೆಯಾದರೆ ಬೇಲೂರು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net