

ಕೆ.ಎಂ.ದೊಡ್ಡಿ: ಕೃಷಿ ಅಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ದೂರು ನೀಡುವ ಮೂಲಕ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಕಳಂಕ ತರಲು ಷಡ್ಯಂತ್ರ ರೂಪಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಆರೋಪಿಸಿದರು.
ಸಮೀಪದ ಅಣ್ಣೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಜಯಲಕ್ಷ್ಮೀ ಹಾಗೂ ಉಪಾಧ್ಯಕ್ಷರಾಗಿ ಮಂಜುಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ 6 ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, ಹಲವು ವರ್ಷಗಳ ನಂತರ ಎನ್.ಚಲುವರಾಯಸ್ವಾಮಿ ಕೃಷಿ ಖಾತೆ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಇದನ್ನು ಸಹಿಸದ ಜೆಡಿಎಸ್ ಪಕ್ಷದ ಪ್ರಮುಖರು, ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಕಳಂಕರನ್ನಾಗಿ ಮಾಡಲು ಹೊರಟಿದ್ದಾರೆ. ಇದು ಲಿಸುವುದಿಲ್ಲ ಎಂದರು.
ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಅಪಪ್ರಚಾರ ಮಾಡುತ್ತಿದ್ದು, ಸತ್ಯಾಸತ್ಯತೆಗಳು ಮುಂದಿನ ದಿನಗಳಲ್ಲಿ ಜನರಿಗೆ ತಿಳಿಯುತ್ತದೆ. ಕೃಷಿ ಅಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ದೂರು ನೀಡಿರುವ ಸುಳ್ಳು ಪತ್ರದ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹೆಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಸತೀಶ (ಪಿಐ), ಜಯಲಕ್ಷ್ಮೀ ಎಂಬುವರು ಜಿ.ಪಂ. ಮಾಜಿ ಸದಸ್ಯ ಎ.ಎಸ್.ರಾಜೀವ್ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಜಿ.ಪಂ. ಮಾಜಿ ಸದಸ್ಯ ಎ.ಎಸ್.ರಾಜೀವ್, ಗ್ರಾಪಂ ಮಾಜಿ ಅಧ್ಯಕ್ಷರಾದ ಬಿ.ವರದರಾಜು, ಸ್ಟೋರ್ ಜಯರಾಮು, ಶೇಖರ್, ನಾಗಮಣಿ ಮಹೇಂದ್ರ, ಮುಖಂಡರಾದ ಆರ್.ಸಿದ್ದಪ್ಪ, ಕಾರ್ಕಹಳ್ಳಿ ಸ್ವರೂಪ್ ಚಂದ್ರ, ಅಣ್ಣೂರು ಪ್ರಸನ್ನ, ಯೋಗ, ವೀರೇಂದ್ರ, ತಮ್ಮಣ್ಣ, ಆಟೋಪಾರ್ಟ್ಸ್ ವರದರಾಜು, ಬೋರೇಗೌಡ, ಮಾದೇಶ, ಶೇಖರ್, ರಾಜಣ್ಣ ಹೇಮಾವತಿ, ಶಿಲ್ಪಾ ಇತರರಿದ್ದರು.