ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್, ತ್ಯಾಜ್ಯ ತೆರವು

13
Published on

ಕಾವೇರಿ ಸಮೂಹ ವಿದ್ಯಾಸಂಸ್ಥೆ, ಡಾ.ಚಂದ್ರಶೇಖರ್ ಫೌಂಡೇಶನ್ ವತಿಯಿಂದ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನದ ಅಂಗವಾಗಿ ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಮತ್ತು ತ್ಯಾಜ್ಯ ತೆರವುಗೊಳಿಸಲಾಯಿತು.

ಪರಿಸರ ಬಳಗ ಸಂಸ್ಥೆಯ ಸಂಸ್ಥಾಪಕಿ ಲೀಲಾ ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ.ಚಂದ್ರಶೇಖರ್ ಫೌಂಡೇಶನ್‌ನ ಕಾವೇರಿ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಚಂದ್ರಶೇಖರ್, ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಸರಳಾ ಚಂದ್ರಶೇಖರ್, ಕಾವೇರಿ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲ ಡಾ.ರಾಜ್ ಕಣ್ಣನ್, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net