ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಆಗ್ರಹ

9
Published on

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕೆಂದು ಆಗ್ರಹಿಸಿ ಹಿಂದು ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಅಂಚೆ ಕಾರ್ಡ್ ಚಳವಳಿ ನಡೆಸಲಾಯಿತು.

ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ವಸ್ತ್ರಸಂಹಿತೆ ಜಾರಿ ಮಾಡುವಂತೆ ಒತ್ತಾಯಿಸಿ ಅಂಚೆ ಕಾರ್ಡಿನಲ್ಲಿ ಬರೆದು ಕಳುಹಿಸಲಾಯಿತು. ಈಗಾಗಲೇ ದೇಶದ ಹಾಗೂ ರಾಜ್ಯದ ಅನೇಕ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿದೆ. ಪ್ರವಾಸಿ ಸ್ಥಳ ಹಾಗೂ ಧಾರ್ಮಿಕ ಸ್ಥಳಗಳಿಗೆ ವ್ಯತ್ಯಾಸವಿದೆ. ಈಗ ಹಾಸನಾಂಬೆ ದೇಗುಲ ಪ್ರವೇಶಕ್ಕೂ ವಸ್ತ್ರಸಂಹಿತೆ ಜಾರಿಯಾಗಿದೆ. ಆದರೆ ವಿಶ್ವವಿಖ್ಯಾತ ಚಾಮುಂಡಿಬೆಟ್ಟದ ದೇವಸ್ಥಾನದಲ್ಲಿ ಜಾರಿಯಾಗಿಲ್ಲ. ಕೂಡಲೇ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ ಎಂದು ಆಗ್ರಹಿಸಿದರು.

ಈ ವೇಳೆಯಲ್ಲಿ ಅರಮನೆ ಆವರಣದಲ್ಲಿರುವ ಮುಜರಾಯಿ ಇಲಾಖೆಯ ಕಚೇರಿಗೂ ಸಹ ಮನವಿ ಸಲ್ಲಿಸಲಾಯಿತು. ಹಿಂದು ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿಯ ಸಂಚಾಲಕ ಮೈಕಾ ಪ್ರೇಮ್ ಕುಮಾರ್, ಸಹ ಸಂಚಾಲಕರಾದ ಸಂಜಯ್, ರಾಕೇಶ್ ಭಟ್, ಮುಖಂಡರಾದ ಶಿವು ಪಟೇಲ್, ಜೀವನ್ ಕುಮಾರ್, ಸಚಿನ್ ನಾಯಕ್, ಪ್ರಜ್ವಲ್ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net