ಚಾಮುಲ್ ನೇಮಕಾತಿ ರದ್ದುಗೊಳಿಸಲು ಆಗ್ರಹ

Published on

ಚಾಮರಾಜನಗರ: ಚಾಮುಲ್ ವಿವಿಧ ಹುದ್ದೆಗಳ ನೇಮಕಾತಿಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ನಗರದಲ್ಲಿ‌‌‌ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು, ಚಾಮುಲ್ ನ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ. ಇದಕ್ಕೆ ಕಾರಣವಾದ ಆಡಳಿತ ಮಂಡಳಿಯನ್ನು ತಕ್ಷಣ ವಜಾಗೊಳಿಸಬೇಕು.

ನೇಮಕಾತಿ ಅಕ್ರಮ ತನಿಖೆಯ ವರದಿಯನ್ನು ಸರ್ಕಾರ ತ್ವರಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದಲಿತ ಮಹಾ ಸಭಾ ಅಧ್ಯಕ್ಷ ವೆಂಕಟರಮಣಸ್ವಾಮಿ, ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಸವನಪುರ ರಾಜಶೇಖರ್, ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಂ.ವೀರಭದ್ರಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net