ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಲಾರಿ ಪಲ್ಟಿ

7 mdg 2 accident
ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸರಕು ತುಂಬಿದ್ದ ಲಾರಿ ಪಲ್ಟಿಯಾಗಿ ಟ್ರಾಫಿಕ್ ಜಾಮ್ ಉಂಟಾಗಿರುವುದು
Published on

ಮೂಡಿಗೆರೆ: ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸರಕು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ. ಹಾಸನದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ಘಾಟ್‌ನ 6ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಅವಘಡದಲ್ಲಿ ಲಾರಿಗೆ ಭಾಗಶಃ ಹಾನಿಯಾಗಿದೆ. ಗಾಯವಾಗಿದ್ದ ಚಾಲಕನನ್ನು ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಪಲ್ಟಿಯಾದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೆದ್ದಾರಿ ಗಸ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪಲ್ಟಿಯಾದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net