ಚಿಕಿತ್ಸೆ ಪಡೆದರೇ ಆನೆಕಾಲು ರೋಗ ಮುಕ್ತ

bkt-30-1
ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಗುರುವಾರ ಆನೆಕಾಲು ರೋಗ ನಿರ್ಮೂಲನೆಗೆ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಮಂಜೂನಾಥ ಡಿ.ಎನ್ ಚಾಲನೆ ನೀಡಿದರು.
Published on

ಬಾಗಲಕೋಟೆ: ಕ್ಯೂಲೆಕ್ಸ್ ಸೊಳ್ಳೆ ಕಚ್ಚುವದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗವಾಗಿದ್ದು, ಚಿಕಿತ್ಸೆ ಪಡೆದುಕೊಂಡಲ್ಲಿ ರೋಗದಿಂದ ಮುಕ್ತರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಮಂಜೂನಾಥ ಡಿ.ಎನ್ ಹೇಳಿದರು.

ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ರೋಗಗಳ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಾಲಯದ ಸಹಯೋಗದಲ್ಲಿ ಗುರುವಾರ ಆನೆಕಾಲು ರೋಗ ನಿರ್ಮೂಲನೆಗೆ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ರೋಗ ನಿಮ್ಮ ಸುತ್ತಮುತ್ತಲಿನ ಕೊಳಚೆ ಪ್ರದೇಶದಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳಿಂದ ಹಾಗೂ ಹಲವು ವರ್ಷಗಳ ನಂತರ ಕೈ, ಕಾಲು ದಪ್ಪವಾಗುತ್ತವೆ. ಚಿಕಿತ್ಸೆಯಿಂದ ರೋಗ ಮುಕ್ತರನ್ನಾಗಿ ಮಾಡಲಾಗುತ್ತಿದೆ. ವರ್ಷದಲ್ಲಿ ಒಂದು ಬಾರಿ ಡಿಇಸಿ ಮತ್ತು ಅಲ್ಬೆಂಡಜೋಲ್ ಮಾತ್ರ ಸೇವನೆಯಿಂದ ರೋಗದಿಂದ ಮುಕ್ತರಾಗಬಹುದು. ಈ ರೋಗದ ಬಗ್ಗೆ ಜನರಲ್ಲಿ ಜಾಗೃತ ಮೂಡಿಸುವ ನಿಟ್ಟಿನಲ್ಲಿ ಅಭಿಯಾನದ ರೂಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಽಕಾರಿ ಶಶಿಕಲಾ ಶಿನ್ನೂರ, ತಾಲೂಕಾ ವೈದ್ಯಾಽಕಾರಿ ಡಾ.ಸರಸ್ವತಿ ಮಾಗಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net