ಚಿಕ್ಕದೇವಮ್ಮನ ಬೆಟ್ಟ ಅಭಿವೃದ್ಧಿಪಡಿಸಲು ಕ್ರಮ

18 SARAG 02
Published on
  • ಸರಗೂರು: ತಾಲೂಕಿನ ನಾಡದೇವತೆ ಚಿಕ್ಕದೇವಮ್ಮನ ಬೆಟ್ಟಕ್ಕೆ ಈಗಾಗಲೇ ಸಾಕಷ್ಟು ಅನುದಾನವನ್ನು ನೀಡುತ್ತಾ ಬಂದಿದ್ದು, ಬೆಟ್ಟದ ಮೇಲಿನ ರಸ್ತೆಯ ಸುತ್ತಲಿನ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬೆಟ್ಟವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ನಮ್ಮ ಜಿಲ್ಲೆಯವರೇ ಆದ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ಅನುದಾನ ಬಿಡುಗಡೆಗೆ ಕೋರುವುದಾಗಿ ಶಾಸಕ ಅನಿಲ್ ಚಿಕ್ಕಮಾದು ಭರವಸೆ ನೀಡಿದರು.
    ಚಿಕ್ಕದೇವಮ್ಮ ಬೆಟ್ಟಕ್ಕೆ ಶುಕ್ರವಾರ ತಾಯಿ ನಾಗಮ್ಮ, ಪತ್ನಿ ಸೌಮ್ಯ ಅನಿಲ್ ಚಿಕ್ಕಮಾದು ಹಾಗೂ ಮಕ್ಕಳೊಂದಿಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿ ಅವರು, ವಿಧಾನಸಭಾ ಚುನಾವಣೆಯಲ್ಲಿ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಕಾರಣ ಚಿಕ್ಕದೇವಮ್ಮ ಬೆಟ್ಟಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ಭಾಗಿಯಾಗಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ತಮ್ಮ ಕುಟುಂಬ ಹಾಗೂ ತಾಲೂಕಿನ ಜನತೆಯ ಒಳಿತಿಗೆ ಪ್ರಾರ್ಥಿಸಿದ್ದೇನೆ ಎಂದರು.
    ಎಚ್.ಸಿ.ಮಹದೇವಪ್ಪ ಅಭಿಮಾನಿಗಳ ಬಳಗದ ಅಧ್ಯಕ್ಷ ಎಚ್.ಸಿ.ಮಂಜುನಾಥ, ಜಿಪಂ ಮಾಜಿ ಸದಸ್ಯರಾದ ಚಿಕ್ಕವೀರನಾಯಕ, ಪಿ. ರವಿ, ಪುರದಕಟ್ಟೆ ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ, ಮುಖಂಡರಾದ ಶಂಭುಲಿಂಗನಾಯಕ, ಪರಶಿವಮೂರ್ತಿ, ಶಶಿಪಟಲ್, ದಿನೇಶ್, ಪ್ರಭುಸ್ವಾಮಿ, ಈರೇಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net