ವಿಜಯವಾಣಿ ಸುದ್ದಿಜಾಲ ಕೋಲಾರ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಕಾರ್ಯ ಮತ್ತು ಪ್ರಚಾರ ಕಾರ್ಯಕ್ರಮಗಳಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದು ಬಾಲಕಾರ್ಮಿಕರ ನಿಷೇಧ ಕಾಯ್ದೆಯ ಪ್ರಕಾರ ಕಾನೂನು ಬಾಹಿರವಾಗಿದೆ. ಚುನಾವಣಾ ಕಾರ್ಯ ಮತ್ತು ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಸ್ಥೆಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ಆದೇಶಿಸಿದ್ದಾರೆ.
ಭಾರತ ಸರ್ಕಾರ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಂಬAಧಿಸಿದAತೆ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನು ಉಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.
ರಾಷ್ಟಿçÃಯ ಮಕ್ಕಳ ಆಯೋಗವು ಸಹ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷದವರು ೧೮ ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳದಂತೆ ನಿರ್ದೇಶನ ನೀಡಿದೆ. ಒಂದು ವೇಳೆ ಮಕ್ಕಳನ್ನು ಚುನಾವಣಾ ಕಾರ್ಯ ಮತ್ತು ಪ್ರಚಾರಕ್ಕೆ ಬಳಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.