ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ?: ನಳೀನ್ ಕುಮಾರ್ ಕಟೀಲ್ ವಿರುದ್ಧದ ಎಫ್ಐಆರ್‌ಗೆ ನೀಡಿದ್ದ ತಡೆ ವಿಸ್ತರಣೆ

highcourt
Published on

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್‌

ರದ್ದುಗೊಳಿಸುವಂತೆ ಕೋರಿ ಮಾಜಿ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ. 5ಕ್ಕೆ ಮುಂದೂಡಿದೆ.

ವಾದ ಮಂಡನೆಗೆ ದೂರುದಾರರ ಪರ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆ ವಿಚಾರಣೆಯನ್ನು ನ.5ಕ್ಕೆ ಮುಂದೂಡಿದ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಹಿಂದಿನ ವಿಚಾರಣೆ ವೇಳೆ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿ ಆದೇಶಿಸಿದೆ.

ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು. ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net