ಜ.31 ರಂದು ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜ.31 ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ ಕೊಂಬಾರು ಶಾಲೆಯಲ್ಲಿ ನಡೆಯಲಿದೆ.

34 ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಗ್ರಾಮದ ಜನರಿಗೆ ಮಾಹಿತಿ ನೀಡಿ, ಊರಿನ ಸಮಸ್ಯೆ ಪರಿಹರಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಶಿಬಿರ ಉದ್ಘಾಟಿಸುವರು ಎಂದು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net