ಜನಪರ ಆಡಳಿತಗಾರ ಸಿದ್ದರಾಮಯ್ಯ

CM Siddaramaiah
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ವಾಲ್ಮೀಕಿ ನಿಗಮದ ಹಗರಣ ನೆಪದಲ್ಲಿ ಪಾದಯಾತ್ರೆ ಕೈಗೊಂಡಿರುವ ಬಿಜೆಪಿ-ಜೆಡಿಎಸ್ ನಾಯಕರು ತಮ್ಮ ಅಧಿಕಾರಾವಧಿಯ ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸಿಕೊಳ್ಳಬೇಕು ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದರು.
ಈಗ ಪಾದಯಾತ್ರೆ ಕೈಗೊಂಡಿರುವವರು ಆಡಳಿತದಲ್ಲಿದ್ದ ವೇಳೆ ಇಡೀ ದೇಶ ತಲೆ ತಗ್ಗಿಸುವ ಘಟನೆಗಳು ನಡೆದಿವೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇರುವಾಗಲೆಲ್ಲ ಶೋಷಿತರೂ ಸೇರಿದಂತೆ ಶೇ.80ರಷ್ಟು ಜನರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಬಡ ಜನರಿಗೆ ಅನುಕೂಲವಾಗುವ ಕಾರ್ಯಕ್ರಮ ಜಾರಿಗೊಳಿಸಿದ್ದಾರೆ. ಹೀಗಾಗಿ ನಗರದಲ್ಲಿ ಆ.9ರಂದು ಹಮ್ಮಿಕೊಂಡಿರುವ ಜನಾಂದೋಲನ ಸಮಾವೇಶದಲ್ಲಿ ಅಶೋಕಪುರಂನಿಂದ ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶಕ್ಕೆ ಬಹುತೇಕ ಎಲ್ಲ ದಲಿತ ಸಂಘಟನೆಗಳ ಬೆಂಬಲವಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖಂಡರಾದ ಭುವನೇಶ್ವರಿ, ಮಹೇಶ್, ಶ್ರೀಧರ್, ನಟರಾಜ್, ಮಂಜು ಇದ್ದರು.c

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net