ಜನಪರ ಉತ್ಸವ ಅಂಗವಾಗಿ ಕೋಲಾರದಲ್ಲಿ ಸಂಚಾರದಲ್ಲಿ ಬದಲಾವಣೆ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ನಗರದ ಜೂನಿಯರ್ ಕಾಲೇಜು ಮೈದಾನ ಮತ್ತು ರಂಗಮAದಿರದಲ್ಲಿ ಫೆ.೨೪ ರಿಂದ ೨೫ರ ತನಕ ಜನಪರ ಉತ್ಸವ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಹಾಗೂ ನಚಿಕೇತನ ನಿಲಯದಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಕೋಲಾರ ಜಿಲ್ಲೆಯಿಂದ ನೂರಾರು ಕಲಾ ತಂಡಗಳು ಭಾಗವಹಿಸಲಿವೆ. ಮತ್ತು ಕಾರ್ಯಕ್ರಮ ವೀಕ್ಷಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಸಾರ್ವಜನಿಕರ ವಾಹನಗಳ ಸಂಚಾರ ದಟ್ಟಣೆ ಆಗದಂತೆ ನಗರದಲ್ಲಿ ಕೆಲವು ಸಂಚಾರ ಮಾರ್ಗವನ್ನು ಬದಲಾವಣೆ ಮಾಡಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಪೋಲಿಸ್ ಇಲಾಖೆ ಮನವಿ ಮಾಡಿದೆ.

ಕೋಲಾರ ನಗರದಲ್ಲಿ ಪ್ರತಿನಿತ್ಯ ಸಂಚರಿಸುವ ವಾಹನಗಳ ಸಂಚಾರವನ್ನು ಫೆ.೨೪ ಮತ್ತು ೨೫ ಈ ಎರಡು ದಿನಗಳ ಕಾಲ ನಗರದ ಮೆಕ್ಕೆ ವೃತ್ತದಿಂದ ಬಂಗಾರಪೇಟೆ ವೃತ್ತದ ವರೆವಿಗೆ ಎಲ್ಲಾ ಲಘು ಮತ್ತು ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಸಂಚಾರ ಮಾರ್ಗ ಬದಲಾವಣೆ :

ಮೆಕ್ಕೆ ವೃತ್ತದಿಂದ ಬಂಗಾರಪೇಟೆ ವೃತ್ತದವರೆವಿಗೂ ಸಂಚರಿಸುವ ವಾಹನಗಳು ಅಮ್ಮವಾರಿಪೇಟೆ ವೃತ್ತ, ಕೆ.ಎಸ್.ಆರ್.ಟಿ.ಸಿ ವೃತ್ತದ ಮಾರ್ಗವಾಗಿ ಕ್ಲಾಕ್ ಟವರ್ ಮುಖಾಂತರ ಸಂಚರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಬಂಗಾರಪೇಟೆ ವೃತ್ತದ ಕಡೆಯಿಂದ ಮೆಕ್ಕೆ ವೃತ್ತದ ಕಡೆ ಸಂಚರಿಸುವ ವಾಹನಗಳನ್ನು ಎಸ್.ಎನ್.ಆರ್.ವೃತ್ತ, ಡ್ಯೂಂಲೈಟ್ ವೃತ್ತದ ಮಾರ್ಗವಾಗಿ ಕ್ಲಾಕ್‌ಟವರ್ ಮುಖಾಂತರ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ಪಾರ್ಕಿಂಗ್ ಸ್ಥಳಗಳು :

ರಂಗಮAದಿರ ಮತ್ತು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸಾಂಸ್ಕೃತಿ ಕಾರ್ಯಕ್ರಮಗಳನ್ನು ವೀಕ್ಷಿಸಲು ಬರುವ ಸಾರ್ವಜನಿಕರು ತಮ್ಮ ದ್ವಿಚಕ್ರ ವಾಹನ ಮತ್ತು ಕಾರು ಇತರೆ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ.

ಕಾರು ಮತ್ತು ದ್ವಿಚಕ್ರ ವಾಹನಗಳಿಗೆ :

ಮೆಥೋಡಿಸ್ಟ್ ಶಾಲಾ ಆವರಣ, ಸಾರ್ವಜನಿಕ ಗ್ರಂಥಾಲಯ ಆವರಣ, ಕಾಲೇಜು ವೃತ್ತದ ಬಳಿಯ ಶನಿಮಹಾತ್ಮ ದೇವಸ್ಥಾನದ ಬಳಿಯ ಕಾರ್ ಸ್ಟಾಂಡ್ ರಸೆಯಲ್ಲಿ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಸರ್ಕಾರಿ ಬಾಲಕರ ಕಾಲೇಜು ಮುಂಭಾಗದ ರಸ್ತೆ ಮತ್ತು ಕಾಲೇಜು ಒಳಭಾಗ, ರೈಲ್ವೇ ನಿಲ್ದಾಣ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಭಾರೀವಾಹನಗಳಿಗೆ :

ಕಾರ್ಯಕ್ರಮವನ್ನು ವೀಕ್ಷಿಸಲು ಸಾರ್ವಜನಿಕರನ್ನು ಕರೆದುಕೊಂಡು ಬರುವ ಮಿನಿ ಬಸ್ ಹಾಗೂ ಇತರೆ ಭಾರೀ ವಾಹನಗಳು ಸಾರ್ವಜನಿಕರನ್ನು ಇಳಿಸಿದ ನಂತರ ಸಿ.ಬೈರೇಗೌಡ ನಗರದಲ್ಲಿರುವ ಖಾಲಿ ಮೈದಾನದಲ್ಲಿ ನಿಲ್ಲಿಸುವಂತೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ.

ಮೆಕ್ಕೆ ವೃತ್ತದಿಂದ ಬಂಗಾರಪೇಟೆ ವೃತ್ತದ ವರೆವಿಗೆ ಎರಡೂ ಬದಿ ರಸ್ತೆಗಳಲ್ಲಿ ಯಾವುದೇ ವಾಹನಗಳ ಪಾರ್ಕಿಂಗ್ ನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪೋಲಿಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net