ಜನಸಮಾನ್ಯರ ಆರ್ಥಿಕ ಉನ್ನತೀಕರಣಕ್ಕೆ ಗ್ಯಾರಂಟಿ ಯೋಜನೆ ಸಹಕಾರಿ / ಸಚಿವ ಬೈರತಿ ಸುರೇಶ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿ ನೀಡಿ ಸಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಕೋಲಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಕಿರುಹೊತ್ತಿಗೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಯ ಕುರಿತು ಪ್ರತಿ ತಾಲ್ಲೂಕಿನಲ್ಲಿ ಮಾಹಿತಿ ಕಲೆಹಾಕಿ ಪಲಾನುಭವಿಗಳ ಅನಿಸಿಕೆಗಳೊಂದಿಗೆ ಕಿರುಹೊತ್ತಿಗೆ ಮೂಡಿಬಂದಿದೆ. ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಸಮಗ್ರ ಮಾಹಿತಿಯನ್ನು ಒಳಗೊಂಡು ಸುಂದರವಾಗಿ ರೂಪುಗೊಂಡಿರುವ ಈ ಕಿರುಹೊತ್ತಿಗೆಯು ಸಂಗ್ರಹಯೋಗ್ಯವಾಗಿದೆ ಎಂದು ತಿಳಿಸಿದರು.

ಪಂಚಗ್ಯಾರAಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ದೊರುಕುವಂತೆ ನೋಡಿಕೊಳ್ಳುವುದು ನಮ್ಮ ಆಧ್ಯ ಕರ್ತವ್ಯವಾಗಿದೆ. ಕೆಲವು ಸಣ್ಣ-ಪುಟ್ಟ ನ್ಯೂನತೆಗಳಿಂದ ವಂಚಿತರಾದವರಿಗೆ ನ್ಯಾಯ ಕೊಡಿಸುವ ಕೆಲಸ ಆಗಬೇಕಾಗಿದೆ ಎಂದರು.

ಜಿಲ್ಲೆಯ ಪಂಚಗ್ಯಾರAಟಿ ಯೋಜನೆಯ ಫಲಾನುಭವಿಗಳ ಅಂಕಿ-ಅAಶಗಳನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಅಧಿಕ ಫಲಾನುಭವಿಗಳು ಇರುವುದು ಕಂಡುಬAದಿದೆ. ಪ್ರತಿಶತ ನೂರರಷ್ಟು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆ-ಮನೆಗೆ ಭೇಟಿ ನೀಡಿ ಗ್ಯಾರಂಟಿ ಯೋಜನೆ ಪ್ರತಿಯೊಬ್ಬರಿಗೂ ತಲುಪಿದೆ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿ, ರಾಜ್ಯದಲ್ಲಿ ಪಂಚಗ್ಯಾರAಟಿಗಳು ಜಾರಿಯಾಗಿ ೨ ವರ್ಷಗಳ ಹೊಸ್ತಿಲಲ್ಲಿದೆ. ಆರ್ಥಿಕ ಸಂಕಷ್ಟದ ಮದ್ಯೆಯೂ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗೃಹಜ್ಯೋತಿ, ಶಕ್ತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಫಲಾನುಭವಿಗಳು ಪಡೆಯುತ್ತಿರುವ ಪ್ರಯೋಜನ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಸೂಚನೆಯಾಗಿ ರಾಜ್ಯ ಬಜೇಟ್‌ನಲ್ಲಿಯೂ ರೂ.೫೧,೩೦೦ ಕೋಟಿ ರೂ.ಗಳ ಅನುದಾನವನ್ನು ಮೀಸಲಿಸಲಾಗಿದೆ. ಈ ಯೋಜನೆಗಳಿಂದ ತುಂಬ ಜನರಿಗೆ ಅನುಕೂಲವಾಗಿದೆ. ಕೋಲಾರ ಜಿಲ್ಲೆಯಲ್ಲಿ ಗೃಹಲಕ್ಷಿö್ಮ ಯೋಜನೆಗಾಗಿ ಸುಮಾರು ೯೦೦ ಕೋಟಿಗಳನ್ನು ವೆಚ್ಚಮಾಡಲಾಗಿದೆ ಎಂದರು.

ಗೃಹಜ್ಯೋತಿ ಯೋಜನೆಯಡಿ ೪ ಲಕ್ಷಕ್ಕೂ ಅಧಿಕ ಬಳಕೆದಾರರಿಗೆ ಶೂನ್ಯ ವಿದ್ಯುತ್ ಬಿಲ್ ಪಾವತಿ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ೧೬ ಕೋಟಿಗೂ ಅಧಿಕ ಮೊತ್ತದ ಹಣವನ್ನು ವಿನಿಯೋಗಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯ ಶೇ.೫೨ ರಷ್ಟು ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. ಸಾರಿಗೆ ಇಲಾಖೆಗೆ ಪ್ರತಿನಿತ್ಯ ಸರಾಸರಿ ಒಟ್ಟಾರೆ ಆದಾಯ ೮೫ ಲಕ್ಷಗಳು ಸಂದಾಯವಾಗುತ್ತಿದೆ. ಯುವನಿಧಿ ಯೋಜನೆಯಡಿ ೪೦೦೨ ವಿದ್ಯಾರ್ಥಿಳು ನೋಂದಣಿಯಾಗಿದ್ದು, ೩೭೯೮ ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಉಪಯೋಗವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯ ಪ್ರತಿ ಕುಟುಂಬಕ್ಕೆ ವಾರ್ಷಿಕ ೫೦ ರಿಂದ ೫೫ ಸಾವಿರ ರೂಗಳ ನಗದು ಪ್ರಯೋಜನವನ್ನು ನಮ್ಮ ಸರ್ಕಾರ ಒದಗಿಸುತ್ತಿದೆ. ಎಲ್ಲಾ ಮಹಿಳೆಯರು, ಎಲ್ಲಾ ಬಡವರಿಗೆ ಸಹಾಯ ಮಾಡಬೇಕೆಂಬುದೆ ಗ್ಯಾರಂಟಿ ಯೋಜನೆಗಳ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಚಿವರಾದ ಡಾ.ಎಂ.ಸಿ.ಸುಧಾಕರ, ಶಿವಾನಂದ ಪಾಟೀಲ್, ಬ್ಯಾಡಗಿ ಶಾಸಕರಾದ ಬಸವರಾಜ್ ಶಿವಣ್ಣನವರ್ ಉಪಸ್ಥಿತರಿದ್ದರು.

ಚಿತ್ರ ೧೧ ಕೆ.ಎಲ್.ಆರ್. ೦೨ : ಗ್ಯಾರಂಟಿ ಯೋಜನೆಗಳ ಬಗ್ಗೆ ಕೋಲಾರ ವಾರ್ತಾಇಲಾಖೆಯು ಹೊರ ತಂದಿರುವ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದ ಜಿಲ್ಲಾ ಉಸ್ತುವಾರಿ ಸಚವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್, ಸಚಿವ ಶಿವಾನಂದ ಪಾಟೀಲ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net