ಜಲಜೀವನ್ ಯೋಜನೆ ವಸ್ತುಪ್ರದರ್ಶನಕ್ಕೆ ಚಾಲನೆ

IMG-20241105-WA0185
Published on

ಸಾಲಿಗ್ರಾಮ: ಜಿ.ಪಂ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಸಪ್ತ ಮಾತೃಕೆ ದೇವಿರಮ್ಮ ತಾಯಿ ಜಾತ್ರಾ ಮಹೋತ್ಸವದ ಅಂಗವಾಗಿ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆ ಕುರಿತಂತೆ ಜನರಿಗೆ ಅರಿವು ಮೂಡಿಸುವ ವಸ್ತು ಪ್ರದರ್ಶನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ವೆಂಕಟೇಶ ನಾಯಕ ಚಾಲನೆ ನೀಡಿದರು.

ಜಲಜೀವನ್ ಯೋಜನೆಯಿಂದ ಪ್ರತಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವುದರಿಂದ ಸಾರ್ವಜನಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ನೀರನ್ನು ವ್ಯರ್ಥ ಮಾಡದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಿ ಎಂದು ರೇಣುಕಾ ಸಲಹೆ ನೀಡಿದರು.

ಗ್ರಾ.ಪಂ. ಮಾಜಿ ಅಧ್ಯಕ್ಷ ಲೋಕೇಶ್, ಪಿಡಿಒ ಮಹದೇವ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಹರ್ಷಿತ್, ಜಿ.ಪಂ. ಸಾಮಾಜಿಕ ಅಭಿವೃದ್ಧಿ ಸಮಾಲೋಚಕ ನಿರಂಜನ್ ಕುಮಾರ್, ನಾಗೇಶ್, ಮುಖಂಡ ವೆಂಕಟೇಶ ನಾಯಕ, ಬಿಲ್ ಕಲೆಕ್ಟರ್ ಸುಂದರ, ಹಣಕಾಸು ಸಮಾಲೋಚಕ ಡಿಟಿಎಸ್‌ಯು ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಪಂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net