ಜಲಪಾತೋತ್ಸವ ಆಚರಿಸಲು ಸರ್ಕಾರ ಅನುಮತಿ

28 KRN-2
ಕೆ.ಆರ್.ನಗರ ಪಟ್ಟಣದಲ್ಲಿ ನಡೆದ ಗ್ರಾಮೀಣ ದಸರಾ ಕಾರ್ಯಕ್ರಮದಲ್ಲಿ ಪೂರ್ಣಕುಂಭದೊಂದಿಗೆ ಮೆರೆವಣಿಗೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಯ ಸಿಬ್ಬಂಧಿಗಳು.
Published on

ಕೆ.ಆರ್.ನಗರ: ಈ ಬಾರಿ ಸರ್ಕಾರದಿಂದ ಚುಂಚನಕಟ್ಟೆಯ ಶ್ರೀರಾಮ ದೇವರ ಸನ್ನಿಧಿಯಲ್ಲಿ ಜಲಪಾತೋತ್ಸವ ಕಾರ್ಯಕ್ರಮ ನಡೆಸಲು ಸರ್ಕಾರದಿಂದ ಅನುಮತಿ ಪಡೆಯಲಾಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.


ಪಟ್ಟಣದ ಡಾ.ರಾಜ್ ಬಾನಂಗಳದಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾರ ಆಯೋಜಿಸಿದ್ದ ಗ್ರಾಮಿಣ ದಸರಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಪ್ರವಾಸೋದ್ಯಮ ಇಲಾಖೆ ಸಚಿವನಾಗಿದ್ದಾಗ ಪ್ರಾರಂಭಿಸಿದ ಜಲಪಾತೋತ್ಸವ, ಚುಂಚನಕಟ್ಟೆ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಜತೆಗೆ ದೇವಸ್ಥಾನ ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮ ಇಲಾಖೆಗೆ ಸೇರ್ಪಡೆ ಮಾಡಲಾಗಿದೆ ಎಂದರು.


ವರ್ಷಪೂರ್ಣ ದುಡಿಮೆಯಲ್ಲಿದ್ದ ರೈತ ಗ್ರಾಮಿಣ ದಸರಾದಲ್ಲಿ ಭಾಗವಹಿಸುವ ಮೂಲಕ ಸಂತೋಷದಿಂದ ಕಾಲ ಕಳೆಯುವುದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಗ್ರಾಮೀಣ ದಸರಾ ಆಚರಿಸಲಾಗುತ್ತಿದೆ. ಈಗಾಗಲೇ ನಟ ದಿ.ಪುನಿತ್‌ರಾಜ್‌ಕುಮಾರ್ ನೆನಪಿನ ನುಡಿನಮನದ ಅಂಗವಾಗಿ ರಸಮಂಜರಿ ಕಾರ್ಯಕ್ರಮವನ್ನು ಅ.29 ರಂದು ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪ್ರೊಬೆಷನರಿ ಉಪವಿಭಾಗಾಧಿಕಾರಿ ಹರೀಶ್ ಮಾತನಾಡಿದರು. ತಹಸೀಲ್ದಾರ್‌ಗಳಾದ ಎಸ್.ಸಂತೋಷ್, ಮೋಹನ್‌ಕುಮಾರ್, ತಾಪಂ ಇಒ ಎಚ್.ಕೆ.ಸತೀಶ್, ಪುರಸಭಾ ಮುಖ್ಯಾಧಿಕಾರಿ ಡಾ.ಜಯಣ್ಣ, ಬಿಇಒ ಟಿ.ಎನ್.ಗಾಯತ್ರಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್, ಜಿಪಂ ಎಇಇ ವಿನುತ್, ಬಿಸಿಎಂ ಅಧಿಕಾರಿ ಜಿ.ಜೆ.ಮಹೇಶ್, ಸಿಡಿಪಿಒ ಪೂರ್ಣಿಮಾ, ಟಿಎಚ್‌ಒ ಡಾ.ಕೆ.ಆರ್.ಮಹೇಂದ್ರಪ್ಪ, ಸಿಪಿಐ ಲವ, ಪಿಎಸ್‌ಐ ಚಂದ್ರಹಾಸ, ಸಿಆರ್‌ಪಿ ಈಶ್ವರ, ರೈತ ಮುಖಂಡ ಗರುಡಗಂಭದ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಆದಿಶಕ್ತಿ ತೋಪಮ್ಮ ತಾಯಿ ದೇವಸ್ಥಾನದದಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಸ್ತಬ್ಧಚಿತ್ರಗಳು, ಪೂರ್ಣಕುಂಭ ಮೇಳ, ಮಂಗಳವಾದ್ಯದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆಗೂಡಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಹೊರಟು ನಂತರ ಡಾ.ರಾಜ್ ಬಾನಂಗಳದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net