

ಬೀದಿ ಬದಿಯಲ್ಲಿ ಆಹಾರ ಮಾರಾಟ ಮಾಡುವವರು ಶುಚಿತ್ವ ಕಾಪಾಡಿಕೊಳ್ಳಬೇಕು. ಜನರಿಗೆ ಶುದ್ಧ ಆಹಾರ ಮತ್ತು ನೀರು ನೀಡಬೇಕು ಎಂದು ಸಂಶೋಧನಾ ವಿದ್ಯಾರ್ಥಿ ಕೆ.ವಿವೇಕ್‌ಗೌಡ ತಿಳಿಸಿದ್ದಾರೆ.
ಜನರೂ ಮನೆಯ ಸುತ್ತಮುತ್ತ ನೀರು ಮಡುಗಟ್ಟಿ ನಿಲ್ಲದಂತೆ ಎಚ್ಚರ ವಹಿಸಿದರೆ ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆಯೇ ಇಲ್ಲ. ಹೀಗಾಗಿ ಡೆಂೆ ಜ್ವರ ನಿಯಂತ್ರಣಕ್ಕೆ ಜಿಲ್ಲೆಯ ಜನರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಕಾರ್ಯ ಮಾಡಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲಾ, ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು. ಅಲ್ಲದೆ ಜನರಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದಿದ್ದಾರೆ.