ಜಾರಕಿಹೊಳಿ ಸಿಡಿ ಪ್ರಕರಣ, ಪಿಐಎಲ್ ಇತ್ಯರ್ಥ

ramesh jarakiholi cd
ramesh jarakiholi
Published on

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್​ಐಟಿ) ರಚಿಸಿದ್ದ ನಗರ ಪೊಲೀಸ್ ಆಯುಕ್ತರ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಇದೇ ಪ್ರಕರಣದಲ್ಲಿ ಸಂತ್ರಸ್ತೆ ಸಲ್ಲಿಸಿರುವ ಮತ್ತೆರಡು ತಕರಾರು ಅರ್ಜಿಗಳನ್ನು ಸಂಬಂಧಪಟ್ಟ ಏಕಸದಸ್ಯ ಪೀಠದಲ್ಲಿ (ರೋಸ್ಟರ್ ಬೆಂಚ್) ವಿಚಾರಣೆಗೆ ಆದೇಶಿಸಿದೆ.

ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಪಿಐಎಲ್ ಹಾಗೂ ಸಂತ್ರಸ್ತ ಯುವತಿ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಈ ಆದೇಶ ಮಾಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net