ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕರೂಫ್ ಕೌರ್ ರವರಿಂದ ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ / ಪ್ರಗತಿ ಕುಂಠಿತಗೊAಡಿರುವುದಕ್ಕೆ ಅಸಮಾಧಾನ / ಕಾಮಗಾರಿಗಳು ಪೂರ್ಣಗೊಳಿಸಲು ಸೂಚನೆ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಏಕ್‌ರೂಫ್‌ಕೌರ್ ಮಂಗಳವಾರ ಜಿಲ್ಲೆಯ ವಿವಿಧ ಕಛೇರಿಗಳಿಗೆ ಹಾಗೂ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರಲ್ಲದೆ ಪೌರಾಡಳಿತ ಇಲಾಖೆಯಲ್ಲಿ ಪ್ರಗತಿ ಕುಂಠಿತಗೊAಡಿರುವುದಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಇಲಾಖೆಯ ನಗರೋತ್ತಾನ ಅಮೃತ ಯೋಜನೆ ಎಸ್.ಎಫ್.ಸಿ ಮತ್ತು ಎಸ್.ಸಿ.ಪಿ, ೧೫ನೇ ಹಣ ಕಾಸು ಯೋಜನೆಗಳು ಸ್ವಚ್ಛ ಭಾರತ್ ಮಿಷನ್ ಅಮೃತ್-೨ ಮತ್ತು ಇಂದಿರಾಕ್ಯಾAಟಿನ್ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ನಿರೀಕ್ಷಿತ ಪ್ರಗತಿಯಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿ, ಬಾಕಿಯಿರುವ ಎಲ್ಲಾ ಕಾರ್ಯಕ್ರಮಗಳನ್ನು ಮತ್ತು ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ವರದಿಯನ್ನು ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರೋತ್ಥಾನ ಯೋಜನೆಯಡಿ ಜಿಲ್ಲೆಯಲ್ಲಿ ೧೪೫ ಕೋಟಿ ರೂಪಾಯಿ ಅನುದಾನವಿದ್ದು, ಅದರಲ್ಲಿ ಇನ್ನು ೧೭ ಟೆಂಡರ್ ಕಾಮಗಾರಿಗಳು ಬಾಕಿ ಉಳಿದಿವೆ. ಕೆಜಿಎಫ್ ನಗರಸಭೆಯಲ್ಲಿ ಎರಡು ಕಾಮಗಾರಿಗಳು, ಶ್ರೀನಿವಾಸಪುರ ಪುರಸಭೆಯಲ್ಲಿ ಮೂರು ಕಾಮಗಾರಿಗಳು, ಕೋಲಾರ ನಗರಸಭೆ ಯಲ್ಲಿ ಏಳು ಕಾಮಗಾರಿಗಳು ಬಾಕಿ ಇದೆ. ಈ ಎಲ್ಲಾ ಟೆಂಡರ್ ಪ್ರಕ್ತಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.

ಇನ್ನೇನು ವರ್ಷಾಂತ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯದೇಶಗಳನ್ನು ನೀಡಿ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡುವ ಅವಕಾಶದಿಂದ ವಂಚಿತರಾಗುತ್ತೀರಿ. ಸಾರ್ವಜನಿಕರಿಂದ ಪಡೆದ ತೆರಿಗೆ ಹಣವನ್ನು ಅನಗತ್ಯವಾಗಿ ವೆಚ್ಚ ಮಾಡಿದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕುಡಿಯುವ ನೀರು ಪೂರೈಕೆ ಕುರಿತು ಮಾತನಾಡಿ, ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸಿ ನಾಗರೀಕರಿಗೆ ಕನಿಷ್ಠ ಸೌಕರ್ಯವಾದ ಕುಡಿಯುವ ನೀರನ್ನು ಓದಗಿಸುವುದು, ನಿಮ್ಮ ಇಲಾಖೆಯ ಮುಖ್ಯ ಜವಾಬ್ದಾರಿ ಇದನ್ನು ಸರ್ಮಪಕವಾಗಿ ನಿರ್ವಹಿಸಬೇಕು. ಪೌರ ಕಾರ್ಮಿಕರಿಗೆ ಮನೆಗಳ ನಿರ್ಮಾಣ ಸೇರಿದಂತೆ ಯಾವುದೇ ಕಾರ್ಯಕ್ರಮವು ಸಹ ಪೂರ್ಣ ಪ್ರಗತಿಯಾಗಿಲ್ಲ ಮುಂದಿನ ಜನವರಿ ೨೪ ರೊಳಗೆ ಎಲ್ಲಾ ಟೆಂಡರ್‌ಗಳು ಮುಗಿಸಿರಬೇಕು ಎಂದು ತಿಳಿಸಿದರು.

ಅಮೃತ ಯೋಜನೆಯ ಅಡಿಯಲ್ಲಿ ಮುಳಬಾಗಿಲು, ಶ್ರೀನಿವಾಸಪುರ, ವೇಮಗಲ್ ನಗರಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲು ಯಾವುದೇ ನದಿಗಳ ಮೂಲ ಇಲ್ಲ. ಆದ್ದರಿಂದ ಎತ್ತಿನಹೊಳೆ ಯೋಜನೆ ಜಾರಿಗೆ ಬಂದ ನಂತರ ಈ ನಗರಗಳಲ್ಲಿ ಅಮೃತ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು. ಮಾಲೂರು ಮತ್ತು ಬಂಗಾರಪೇಟೆ ನಗರಗಳಿಗೆ ಯಾರಗೊಳ್ ಡ್ಯಾಂ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಸಣ್ಣಪುಟ್ಟ ಕಾಮಗಾರಿಗಳ ಟೆಂಡರ್ ಬಾಕಿ ಉಳಿದಿವೆ ಅವುಗಳನ್ನು ಪೂರ್ಣಗೊಳಿಸಲು ಸೂಚಿಸಿದರು.

ಕೋಲಾರ ಜಿಲ್ಲೆಯ ಮೂರು ನಗರಗಳಲ್ಲಿ ಮಾತ್ರ ಇಂದಿರಾ ಕ್ಯಾಂಟಿನ್ ಕಾರ್ಯನಿರ್ವಹಿಸುತ್ತಿದೆ. ಉಳಿದ ಕಡೆ ಕಾರ್ಯರೂಪಕ್ಕೆ ತರಬೇಕು ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಸಾರ್ವಜನಿಕರಿಗೆ ಒದಗಿಸಬೇಕು. ಪ್ರತಿದಿನ ಒಂದು ಊಟಕ್ಕೆ ಸರ್ಕಾರದಿಂದ ೬೭ ರೂಪಾಯಿ ಬರುತ್ತದೆ. ಗ್ರಾಹಕರಿಂದ ೨೫ ರೂಪಾಯಿ ಪಡೆಯುತ್ತಾರೆ. ಒಟ್ಟು ೯೨ ರೂಪಾಯಿಯನ್ನು ಗುತ್ತಿಗೆದಾರರು ಪಡೆಯುತ್ತಿದ್ದಾರೆ. ಅದಕ್ಕೆ ತಕ್ಕಂತೆ ಊಟವನ್ನು ನೀಡಲು ಅಧಿಕಾರಿಗಳು ಅಗಾಗ್ಗೆ ಭೇಟಿನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.

ಸಭೆಗೆ ಮುನ್ನ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳೊಂದಿಗೆ ವೇಮಗಲ್‌ನಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ, ಶೆಟ್ಟಿಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಲಾರ ನಗರದ ದರ್ಗಾ ಮೊಹಲ್ಲಾದ ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಹಾಗೂ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ, ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಧಿಕಾರಿ ಡಾ. ಮೈತ್ರಿ, ಪೌರಾಡಳಿತ ಇಲಾಖೆಯ ಯೋಜನಾ ನಿರ್ದೇಶಕಿ ಅಂಬಿಕಾ, ಜಿಲ್ಲೆಯ ಎಲ್ಲಾ ಪುರಸಭೆ ಮತ್ತು ನಗರಸಭೆಯ ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ೨೧ ಕೆ.ಎಲ್.ಆರ್. ೦೬ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕ್‌ರೂಪ್‌ಕೌರ್ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಅಪರ ಜಿಲ್ಲಾಧಿಕಾರಿ ಮಂಗಳ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net