ವಿಜಯವಾಣಿ ಸುದ್ದಿಜಾಲ ಕೋಲಾರ
ಕೋಲಾರ ನಗರದ ಹೃದಯ ಭಾಗದಲ್ಲಿರುವ ಡಿ. ವಿ. ಗುಂಡಪ್ಪ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊAದಿಗೆ ಮುಕ್ತವಾಗಿ ಚರ್ಚಿಸಿದರು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯವನ್ನು ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸುವAತಾಗಬೇಕು ಎಂದು ತಿಳಿಸಿ, ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊAಡರು.
ಗ್ರAಥಾಲಯದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲು ಸ್ಥಳವನ್ನು ಗುರುತಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಗ್ರಂಥಾಲಯದಲ್ಲಿ ಓಡುತ್ತಿರುವ ವಿದ್ಯಾರ್ಥಿಗಳು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗಲು ಇನ್ನಷ್ಟು ಸ್ಪರ್ಧಾತ್ಮಕ ಪುಸ್ತಕಗಳು ಬೇಕಾಗಿವೆ ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.
ನಂತರ ಶೌಚಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಿಶೇಷ ಚೇತನರು ಶೌಚಾಲಯ ಬಳಸಲು ಮತ್ತು ಹೋಗಿ ಬರಲು ಜಾಗವನ್ನು ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಂಥಾಲಯದಲ್ಲಿ ಓದಲು ಬರುವಂತಹ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಮಾತನಾಡಿ, ಪಕ್ಕದಲ್ಲಿರುವ ರಂಗಮAದಿರಕ್ಕೆ ಯಾರಗೊಳ್ ನೀರಿನ ಸಂಪರ್ಕ ಇದ್ದು, ಅದನ್ನು ಗ್ರಂಥಾಲಯಕ್ಕೆ ಸಂಪರ್ಕ ಕಲ್ಪಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ರಂಥಾಧಿಕಾರಿ ಎನ್.ಗಣೇಶ ಹಾಗೂ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.
ಚಿತ್ರ ೨೦ ಕೆ.ಎಲ್.ಆರ್. ೦೫ : ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ನಗರದ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ ಓದುವ ಕೊಠಡಿಯನ್ನು ವೀಕ್ಷಿಸಿದರು. ಜಿಲ್ಲಾ ಗ್ರಂಥಾಧಿಕಾರಿ ಎನ್.ಗಣೇಶ್ ಮುಂತಾದವರು ಇದ್ದರು.