

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೆ 02 ವರ್ಷಗಳ ಅವಧಿಗೆ ಒಬ್ಬ ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಬೇಕಾಗಿದ್ದು, ಸದಸ್ಯರಾಗಬಯಸುವ ವಿಶ್ವಕರ್ಮ ಜನಾಂಗದವರಿoದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ವಿಶ್ವಕರ್ಮ ಜನಾಂಗದವರಾಗಿದ್ದು, ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು. ಕನಿಷ್ಠ 35 ವರ್ಷದಿಂದ ಗರಿಷ್ಠ 65 ವರ್ಷ ವಯೋಮಿತಿಯಲ್ಲಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು, ಜಿಲ್ಲೆಯ ಸಮಗ್ರ ಮಾಹಿತಿ ಹಾಗೂ ವಿಶ್ವಕರ್ಮ ಜನಾಂಗದವರ ಅಂಕಿ ಅಂಶಗಳ ಮಾಹಿತಿ ತಿಳಿದಿರಬೇಕು. ನಿಗಮದಲ್ಲಿ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಯೋಜನೆಗಳ ಪರಂಪರಾಗತವಾಗಿ ಸ್ವಂತ ನಿರ್ವಹಿಸಿರುವ ಅನುಭವ ಹೊಂದಿರಬೇಕು(ಅನುಭವ ಪತ್ರ ಸಲ್ಲಿಸುವುದು), ಅರ್ಜಿದಾರರು ಯಾವುದೇ ಕ್ರಿಮಿನಲ್ ಮೊಕದ್ದಮೆ/ಶಿಕ್ಷೆ ಅನುಭವಿಸಿರಬಾರದು(ಸಂಬoಧಿಸಿದವರಿoದ ಪ್ರಮಾಣ ಪತ್ರ ಪಡೆದು ಸಲ್ಲಿಸುವುದು) ಅರ್ಜಿದಾರರು ಸರಳ ಸಜ್ಜನಿಕೆ ಹಾಗೂ ಇತರರೊಂದಿಗೆ ಗೌರವಾನ್ವಿತವಾಗಿ ವರ್ತಿಸಬೇಕು. ಅರ್ಜಿಯನ್ನು ಆಗಸ್ಟ್ 16 ರೊಳಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2341194 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.