ಜಿಲ್ಲಾ ಮಟ್ಟದ ರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ನಿರ್ಮೂಲನಾ ದಿನಾಚರಣೆ

New Health
Published on

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೈಸೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಹೆಚ್. ಡಿ. ಕೋಟೆ ತಾಲ್ಲೂಕು ಇವರ ಸಹಯೋಗದಲ್ಲಿ “ಜಿಲ್ಲಾ ಮಟ್ಟದ ರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ನಿರ್ಮೂಲನಾ ಕಾರ್ಯಕ್ರಮದ ದಿನಾಚರಣೆ” ಯನ್ನು ಜೂನ್ 24 ರಂದು ಬೆಳಗ್ಗೆ 10 ಗಂಟೆಗೆ ಹೆಚ್. ಡಿ. ಕೋಟೆ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

 ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ. ಅವರು ಅಧ್ಯಕ್ಷತೆಯನ್ನು ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net