

ಮೈಸೂರು ಜಿಲ್ಲೆಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಗರಿಷ್ಠ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸ ಅಭ್ಯರ್ಥಿಯಿಂದ ಅರ್ಜಿಗಳನ್ನು ಪಡೆದು ಸಲ್ಲಿಸಲು ಈ ಸಂಬoಧ ಸದರಿ ಹುದ್ದೆಗೆ ನೇಮಕಾತಿ ಬಯಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಾವಳಿ 1977 ನಿಯಮ 26(2) ರಲ್ಲಿ ತಿಳಿಸಿರುವ ಅಗತ್ಯ ಷರತ್ತುಗಳನ್ನು ಪೂರೈಸಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ಹುದ್ದೆಗೆ ನೇಮಕಾತಿ ಬಯಸುವವರು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ, ವಿದ್ಯಾರ್ಹತೆ ಜಾತಿ ಮತ್ತು ವಕೀಲ ವೃತ್ತಿಯಲ್ಲಿನ ಅನುಭವ. ಇತ್ಯಾದಿ ವಿವರಗಳನ್ನು ನಮೂದಿಸಿದ ಸ್ವಯಂ ವಿವರಣೆಯ ಮಾಹಿತಿಯೊಂದಿಗೆ (ಬಯೋಡೆಟಾ) ವಿದ್ಯಾರ್ಹತೆ: ವಕೀಲ ವೃತ್ತಿಯಲ್ಲಿ ರಾಜ್ಯ ಬಾರ್ ಕೌನ್ಸಿಲ್ ನೊಂದಣಿ ಮತ್ತು ವಕೀಲ ವೃತ್ತಿಯಲ್ಲಿ ಹೊಂದಿರುವ ಅನುಭವದ ಬಗ್ಗೆ ಸ್ಥಳೀಯ ವಕೀಲರ ಸಂಘದ ದೃಡೀಕರಣ ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 08 ರೊಳಗಾಗಿ ಕಛೇರಿ ವೇಳೆಯಲ್ಲಿ ಬೆಳಿಗ್ಗೆ 10 ಗಂಟೆಯಿoದ ಸಂಜೆ 5-30 ಗಂಟೆಯೊಳಗೆ ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು. ಅವಧಿ ಮೀರಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.