ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ತ್ರೆöÊಮಾಸಿಕ ಸಭೆ / ದೌರ್ಜನ್ಯ ಪ್ರಕರಣಗಳನ್ನು ಪರಿಹರಿಸಲು ಶೀಘ್ರ ಕ್ರಮವಹಿಸಿ / ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಜಿಲ್ಲಾದ್ಯಂತ ದೌರ್ಜನ್ಯ ಪ್ರಕರಣಗಳನ್ನು ಪರಿಹರಿಸಲು ಶೀಘ್ರ ಕ್ರಮವಹಿಸಬೇಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ೨೦೨೪ ಮತ್ತು ೨೦೨೫ನೇ ಸಾಲಿನ ತ್ರೈಮಾಸಿಕ ಅನುಸೂಚಿತ ಜಾತಿ ಮತ್ತು ಅನುಸೂಚಿತ (ಪಂಗಡಗಳ ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಇಲಾಖೆಗಳ ವಿಶೇಷ ಘಟಕ ಯೋಜನೆಯಡಿ ಬರುವ ಯೋಜನೆಗಳ ಬಗ್ಗೆ ಪುಸ್ತಕ ಮಾಡಿ ಜಿಲ್ಲೆಯ ಜನರಿಗೆ ಅರಿವು ಮೂಡಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀನಿವಾಸ್ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕೇಂದ್ರಗಳನ್ನು ತೆರೆಯಲು ಈ ಕೂಡಲೇ ಸಂಬAಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದರು.

ಶೀಘ್ರದಲ್ಲೇ ಜಿಲ್ಲೆಯಲ್ಲಿ ಜವಳಿ ಮತ್ತು ಕೈಮಗ್ಗ ಇಲಾಖೆ ವತಿಯಿಂದ ರೆಡಿಮೇಡ್ ಗಾರ್ಮೆಂಟ್ಸ್ ಘಟಕವನ್ನು ಸ್ಥಾಪಿಸಲು ಸಂಬAಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ೩೩ ಜನಸ್ನೇಹಿ ಪೊಲೀಸ್ ಠಾಣೆ ತೆರೆಯಲಾಗಿದೆ. ಯಾವುದೇ ಭಯವಿಲ್ಲದೆ ಪ್ರಕರಣಗಳನ್ನು ದಾಖಲಿಸಬಹುದಾಗಿದೆ. ಕೆ.ಜಿ.ಎಫ್ ಪೊಲೀಸ್ ವ್ಯಾಪ್ತಿಯಲ್ಲಿ ೨೦೨೨, ೨೦೨೩ನೇ ಮತ್ತು ೨೦೨೪ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನಾಂಗದವರ ಮೇಲೆ ದೌರ್ಜನ್ಯ ಪ್ರಕರಣಗಳು ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸುವುದಾಗಿ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್ಸಿ ಮತ್ತು ಎಸ್.ಟಿ ಫಲಾನುಭವಿಗಳಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ಶೀಘ್ರದಲ್ಲಿ ವಿತರಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ೨೦೨೨ ಹಾಗೂ ೨೦೨೩ ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಲ್ಲಿ ಜನಾಂಗದವರ ಮೇಲೆ ನಡೆದ ದೌರ್ಜನ್ಯ ಕೊಲೆ ಪ್ರಕರಣಗಳಲ್ಲಿ ಮೃತಪಟ್ಟ ಅವಲಂಬಿತರ ಕುಟುಂಬಕ್ಕೆ ಸರ್ಕಾರಿ ನೌಕರಿ ಮತ್ತು ಪರಿಹಾರ ಮಂಜೂರು ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಯಾವುದೇ ಅಕ್ರಮವಾಗಿ ಜಲ್ಲಿ ಕ್ರಷರ್‌ಗಳು ನಡೆಯುತ್ತಿರುವುದು ಕಂಡುಬAದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಂಬAಧಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಕೂಡಲೇ ಸ್ಮಶಾನದ ಭೂಮಿಯನ್ನು ಒತ್ತುವರಿ ಮಾಡಿದ್ದಲ್ಲಿ ಎಲ್ಲಾ ತಾಲ್ಲೂಕು ತಹಸೀಲ್ದಾರರು ಸ್ಮಶಾನ ಜಾಗವನ್ನು ಒತ್ತುವರಿ ತೆರುವುಗೊಳಿಸಬೇಕೆಂದು ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಆಟೋರಿಕ್ಷಾಗಳಲ್ಲಿ ಅಡ್ಡಾದಿಡ್ಡಿ ಸಂಚಾರ ಮಾಡುವುದು ಕಂಡು ಬಂದಲ್ಲಿ ಸಂಬAಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯು ಗಡಿ ಭಾಗದಲ್ಲಿ ಇರುವುದರಿಂದಾಗಿ ಹಾಗೂ ಕೈಗಾರಿಕಾ ಪ್ರದೇಶಗಳು ಹೆಚ್ಚಿರುವುದರಿಂದ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಪ್ರಕರಣಗಳು ಮರುಗೊಳಿಸದಿದ್ದಂತೆ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಉಪ ಆಯುಕ್ತರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಹಾಸ್ಟೆಲ್‌ಗಳ ಸುವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯವರು ಸಮಯಕ್ಕೆ ಸರಿಯಾಗಿ ಪರಿಶೀಲಿಸಬೇಕು. ಈ ವರ್ಷದ ಪ್ರಕರಣಗಳಾದ ಸರ್ಕಾರಿ ಜಾಗ ಒತ್ತುವರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನದ ಸಮಸ್ಯೆ, ಬಂಗಾರಪೇಟೆ ತಾಲ್ಲೂಕಿನ ವಸತಿ ಶಾಲೆಗೆ ಸಂಬAಧಿಸಿದ ಕಟ್ಟಡದ ವಿಚಾರ, ಹಾಸ್ಟೆಲ್ ಸಿಬ್ಬಂದಿಗಳ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ಚಾರ್ಟ್ ಅಳವಡಿಸಬೇಕು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಟ್ರಾಸಿಟಿ ದೂರು ಸಲ್ಲಿಸಲು ದೂರವಾಣಿ ನಂಬರ್‌ಗಳನ್ನು ಅಳವಡಿಸುವುದು. ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವುದರ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ. ಬಾಗೇವಾಡಿ, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಅಪರ ಜಿಲ್ಲಾಧಿಕಾರಿ ಮಂಗಳ, ಉಪ ವಿಭಾಗಾಧಿಕಾರಿ ಮೈತ್ರಿ ಹಾಗೂ ಎಲ್ಲಾ ತಾಲ್ಲೂಕು ತಹಸೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಜಿ.ವೆಂಕಟಾಚಲಪತಿ, ಎಂ.ಮುನಿರಾಜು, ವಿ.ನಾರಾಯಣಸ್ವಾಮಿ, ಎನ್.ವೆಂಕಟರಾಮ್, ವೆಂಕಟೇಶ್, ಎಂ.ಮAಜುನಾಥ್, ಬೆಳಮಾರನಹಳ್ಳಿ ಆನಂದ್, ಮಂಜುಳಾ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ೨೪ ಕೆ.ಎಲ್.ಆರ್. ೦೮ : ಜಿಲ್ಲಾಧಿಕಾರಿ ಎಂ.ವಿ.ರವಿ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಅನುಸೂಚಿತ ಜಾತಿ ಮತ್ತು ಅನುಸೂಚಿತ (ಪಂಗಡಗಳ ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ. ಕೋಲಾರ ಎಸ್.ಪಿ. ಬಿ.ನಿಖಿಲ್, ಕೆ.ಜಿ.ಎಫ್. ಶಾಂತರಾಜು, ಸಿ.ಇ.ಓ. ಪ್ರವೀಣ್ ಪಿ.ಬಾಗೇವಾಡಿ ಮುಂತಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net