ವಿಜಯವಾಣಿ ಸುದ್ದಿಜಾಲ ಕೋಲಾರ
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಡಿಸೆಂಬರ್ ೨೭ರ ಬುಧವಾರ ಮಾನ್ಯಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬAಧಿಸಿದ ನಿಖರ ಮಾಹಿತಿ ಹಾಗೂ ಸ್ಪಷ್ಟ ಅಂಕಿ ಅಂಶಗಳನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂಪಾಷ ಸೂಚಿಸಿದರು.
ಜಿಲ್ಲಾಧಿಕಾರಿಯವರ ನ್ಯಾಯಾಂಗ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲಾ ಇಲಾಖೆಗಳ ಮುಖ್ಯಸ್ಥರೆ ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಅಸ್ಪದ ನೀಡುವ ಮಾಹಿತಿಯನ್ನು ಸಭೆಗೆ ನೀಡಬಾರದು. ಸರ್ಕಾರದ ಖಾತರಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮÃ, ಶಕ್ತಿ ಯೋಜನೆಗಳ ಅನುಷ್ಠಾನಗಳ ಬಗ್ಗೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮುಂತಾದ ಪ್ರಮುಖ ಇಲಾಖೆಗಳ ಸಮಗ್ರ ಮಾಹಿತಿ ಪ್ರಕೃತಿ ವಿಕೋಪ ಹಾಗೂ ನೀಡಲಾದ ಪರಿಹಾರ, ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸೂಕ್ತ ಮಾಹಿತಿ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ ೨೬ ಕೆ.ಎಲ್.ಆರ್. ೯೬ : ಜಿಲ್ಲಾಧಿಕಾರಿಗಳ ಭಾವಚಿತ್ರ