ಜಿಲ್ಲೆಯ ಇಲಾಖಾ ಮಟ್ಟದ ಪರಿಚಯಾತ್ಮಕ ಸಭೆ / ಸಮಸ್ಯೆ ಮತ್ತು ಸವಾಲುಗಳನ್ನು ಅರಿಯುವುದು ಮುಖ್ಯ ಉದ್ದೇಶ / ನೂತನ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಸಾರ್ವಜನಿಕವಾಗಿ ಕೆಲಸ ಮಾಡುವಾಗ ಎಲ್ಲಾ ಇಲಾಖೆಗಳ ಸಹಕಾರ, ಸಮನ್ವಯತೆ ಅಗತ್ಯ. ಸಹಕಾರ ಸಮನ್ವಯತೆ ಇಲ್ಲದೆ ಕೆಲಸ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ವಿವಿಧ ಇಲಾಖಾ ಅಧಿಕಾರಿಗಳು ಪರಸ್ಪರ ಸಹಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸಿ. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವAತೆ ನೂತನ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋಲಾರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಚಯಾತ್ಮಕ ಸಭೆ ನಡೆಸಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಯೋಜನೆಗಳು ಮತ್ತು ಸರ್ಕಾರದ ಯೋಜನೆಗಳ ಕಾರ್ಯವೈಖರಿ ಮತ್ತು ಪ್ರಗತಿಯ ಸಮಗ್ರ ಪರಿಶೀಲನೆ ನಡೆಸಿದರು.

ಇಲಾಖೆವಾರು ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮಾತನಾಡಿದ ಜಿಲ್ಲಾಧಿಕಾರಿ ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯದಿAದ ಕೆಲಸ ಮಾಡಿ ನಂಬಿಕೆ, ವಿಶ್ವಾಸ ಗಳಿಸಬೇಕು ಎಂದರು.

ಮುAದಿನ ದಿನಗಳಲ್ಲಿ ಇಲಾಖೆವಾರು ಸಭೆ ಹಾಗೂ ಸಮಸ್ಯೆಗಳ ಕುರಿತು ಪ್ರತ್ಯೇಕ ಸಭೆಗಳನ್ನು ನಡೆಸುವುದಾಗಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಂಗಳ, ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್, ಮುಖ್ಯ ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ, ಕೃಷಿ ಜಂಟಿ ನಿರ್ದೇಶಕರು ಸುಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್. ನಾರಾಯಣ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಶ್ರೀನಿವಾಸ್ ಕೈಗಾರಿಕೆ ಜಂಟಿ ನಿರ್ದೇಶಕರು ನಾಗೇಶ್ ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ೩೦ ಕೆ.ಎಲ್.ಆರ್. ೦೬ : ನೂತನ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net