ಜಿಲ್ಲೆಯಲ್ಲಿ ೩೦ಕ್ಕೂ ಹೆಚ್ಚು ಕನ್ನಡ ಮಾಧ್ಯಮ ಶಾಲೆಗಳಿಗೆ ಕಳೆದ ವರ್ಷ ಬೀಗ / ಪೀಠೋಪಕರಣಗಳು ತುಕ್ಕು / ಇಂಗ್ಲೀಷ್ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕುಸಿತ / ಹೆಚ್ಚು ಗಡಿಭಾಗದ ಶಾಲೆಗಳಿಗೆ ಬೀಗ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಎನ್.ಮುನಿವೆಂಕಟೇಗೌಡ

ಇಂಗ್ಲೀಷ್ ಮಾಧ್ಯಮ ವ್ಯಾಮೋಹ ಮತ್ತು ಕೂಲಿ ಕಾರ್ಮಿಕರು ಉದ್ಯೋಗ ಹುಡುಕಿ ನಗರ ಪ್ರದೇಶದ ಕಡೆ ಮುಖ ಮಾಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು, ಕಳೆದ ೨೦೨೪ ಮತ್ತು ೨೦೨೫ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ೩೦ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗಿ ಮುಚ್ಚಲ್ಪಟ್ಟಿವೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಒಂದರಲ್ಲಿಯೇ ಕಳೆದ ವರ್ಷ ೧೬ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳು ಮುಚ್ಚಲ್ಪಟ್ಟಿವೆ. ಈ ವರ್ಷ ಇನ್ನೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಶೈಕ್ಷಣಿಕ ಸಭೆ ನಡೆಸಿದರೆ ಮುಚ್ಚಲ್ಪಟ್ಟಿರುವ ಶಾಲೆಗಳು ಎಷ್ಟು ಪ್ರಾರಂಭ ಆಗುತ್ತವೆಯೋ ಅಥವಾ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳು ಮುಚ್ಚಲ್ಪಡುತ್ತವೆ ಎಂಬ ಮಾಹಿತಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಯಿಂದ ಹೊರಬೀಳಲಿದೆ.

ಮುಚ್ಚಲ್ಪಟ್ಟಿರುವ ಶಾಲೆಗಳಲ್ಲಿ ಪೀಠೋಪಕರಣಗಳು ತಕ್ಕು ಹಿಡಿಯುವಂತೆ ಆಗಿವೆ. ಹಾಗೂ ಶಾಲೆಯ ಕೊಠಡಿಗಳ ನಿರ್ವಹಣೆ ಇಲ್ಲದೆ ಶಿಥಿಲ ವ್ಯವಸ್ಥೆಗೆ ತಲುಪಿರುವುದು ಹಾಗೂ ಕಾಂಪೌAಡ್ ಗೇಟ್ ಓಪನೆ ಆಗಿ ಶಾಲೆಯ ಆವರಣಗಳನ್ನು ಅಕ್ರಮ ಪ್ರವೇಶ ಮಾಡಿಕೊಂಡು ಅಕ್ರಮ ಚಟುವಟಿಕೆಗಳ ತಾಣವನ್ನು ಮಾಡಿಕೊಂಡಿರುವ ಉದಾಹರಣೆಗಳು ಸಾಕಷ್ಟು ಇವೆ.

ಗಡಿಭಾಗದಲ್ಲಿ ಹಾಜರಾತಿ ಕಡಿಯಾಗಲು ಕಾರಣ :

ಗಡಿಭಾಗದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಹಾಜರಾತಿ ಕಡಿಮೆಯಾಗಲು ಪ್ರಮುಖ ಕಾರಣ ಸರ್ಕಾರಿ ಶಾಲೆಗಳಿಗೆ ಕೂಲಿ ಕಾರ್ಮಿಕರ ಮಕ್ಕಳೇ ಹೆಚ್ಚಾಗಿ ಸೇರುತ್ತಿರುವುದರಿಂದ ಕೂಲಿ ಕಾರ್ಮಿಕರಿಗೆ ಕೈಗೆ ಕೆಲಸ ಸಿಗದ ಕಾರಣ ಬೆಂಗಳೂರಿನAತಹ ದೊಡ್ಡ ದೊಡ್ಡ ಮಹಾಮನಗರ ಪಾಲಿಕೆಗಳಿಗೆ ಕೆಲಸ ಹುಡುಕಿ ಹೋಗುತ್ತಿರುವುದರಿಂದ ಮಕ್ಕಳನ್ನು ಜೊತೆಯಲ್ಲಿ ಕರೆದೊಯ್ಯುತ್ತಿರುವ ಹಿನ್ನಲೆಯಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗಲು ಸಾಧ್ಯವಾಗಿದೆ.

ಶ್ರೀಮಂತರು ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಕನ್ನಡ ಮಾಧ್ಯಮ ಶಾಲೆಗಳಿಗೆ ಮಕ್ಕಳ ಹಾಜರಾತಿ ದಿನೇ ದಿನೇ ಕುಸಿಯುತ್ತಿರುವುದರಿಂದ ಗಡಿಭಾಗದ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ.

ಜಿಲ್ಲೆಯ ಮುಳಬಾಗಿಲು, ಶ್ರೀನಿವಾಸಪುರ, ಬಂಗಾರಪೇಟೆ ತಾಲ್ಲೂಕುಗಳ ಗಡಿಭಾಗಗಳಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳು ಹೆಚ್ಚಾಗಿ ಮುಚ್ಚಲ್ಪಟ್ಟಿವೆ. ನಗರ ಮತ್ತು ಪಟ್ಟಣ ಪ್ರದೇಶದ ಆಜುಬಾಜಿನಲ್ಲಿರುವ ಗ್ರಾಮೀಣ ಭಾಗಗಳ ಕನ್ನಡ ಮಾಧ್ಯಮ ಶಾಲೆಗಳಲ್ಲಿಯು ಮಕ್ಕಳ ಹಾಜರಾತಿ ದಿನೇ ದಿನೇ ಕುಸಿಯುತ್ತಿವೆ. ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಪೋಷಕರು ಒಳಗಾಗಿ ಮಕ್ಕಳಿಗೆ ಇಂಗ್ಲೀಷ್ ಕಲಿಸಬೇಕೆಂಬ ಉದ್ದೇಶದಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಿಗೆ ಬೀಗ ಬೀಳುವಂತೆ ಆಗಿದೆ.

ಕೋಟ್

ಕಳೆದ ವರ್ಷ ಮುಚ್ಚಲ್ಪಟ್ಟಿರುವ ಶಾಲೆಗಳು ಈ ವರ್ಷದಿಂದ ಪ್ರಾರಂಭಗೊಳ್ಳುವ ಸಾಧ್ಯತೆ ಇದೆ. ಮಕ್ಕಳ ಹಾಜರಾತಿಗೆ ಅನುಗುಣವಾಗಿ ಶಾಲೆಗಳನ್ನು ಪ್ರಾರಂಭಿಸುತ್ತೇವೆ. ಒಂದು ವಾರದಲ್ಲಿ ಎಲ್ಲಾ ಶಿಕ್ಷಣಾಧಿಕಾರಿಗಳ ಸಭೆಯನ್ನು ಕರೆದು ಮಾಹಿತಿ ಪಡೆಯಲಾಗುವುದು. ಆಗ ಈ ವರ್ಷ ಪ್ರಾರಂಭವಾಗುವ ಶಾಲೆಗಳ ಸಂಖ್ಯೆ ಎಷ್ಟು ಮತ್ತು ಮುಚ್ಚುವ ಶಾಲೆಗಳ ಸಂಖ್ಯೆಯೆಷ್ಟು ಎಂಬ ಮಾಹಿತಿ ಸಿಗಲಿದೆ. ಮುಚ್ಚಲ್ಪಟ್ಟಿರುವ ಶಾಲೆಗಳಲ್ಲಿರುವ ಪೀಠೋಪಕರಣಗಳನ್ನು ಅಗತ್ಯತೆಗೆ ಅನುಗುಣವಾಗಿ ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಿಸಲಾಗುವುದು.

-ಕೃಷ್ಣಮೂರ್ತಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕೋಲಾರ.

ಕೋಟ್

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಕಲಿಕೆಯನ್ನು ಮುಂದುವರೆಸಿದರೆ ಸರ್ಕಾರಿ ಶಾಲೆಗಳು ಉಳಿಯುತ್ತವೆ. ಶ್ರೀಮಂತರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಾರೆ. ಬಡವರು ಎಲ್ಲಿ ಹೋಗುವುದು. ಬಡವರು ಇತ್ತೀಚೆಗೆ ತಮ್ಮ ಮಕ್ಕಳಿಗೆ ಇಂಗ್ಲೀಷ್ ಕಲಿಸಬೇಕೆಂಬ ಉದ್ದೇಶದಿಂದ ಖಾಸಗಿ ಶಾಲೆಗಳಿಗೆ ಹೆಚ್ಚು ಡೊನೇಷನ್ ನೀಡಿ ಮಕ್ಕಳನ್ನು ಸೇರಿಸಿ ಬಡವರು ಸಾಲಗಾರರಾಗುತ್ತಿದ್ದಾರೆ. ಸರ್ಕಾರ ಕೂಡಲೇ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಿಂದಲೇ ಕನ್ನಡ ಕಡ್ಡಾಯ ಜೊತೆಗೆ ಇಂಗ್ಲೀಷ್ ಕಲಿಸುವ ಕೆಲಸ ಆಗಬೇಕಾಗಿದೆ.

-ಪಿ.ಆರ್.ಸೂರ್ಯನಾರಾಯಣ, ಜಿಲ್ಲಾ ಕಾರ್ಯದರ್ಶಿ ಪ್ರಾಂತ ರೈತ ಸಂಘ

ಚಿತ್ರ ೨೧ ಕೆ.ಎಲ್.ಆರ್. ೦೪ : ಮುಳಬಾಗಿಲು ಸೂರಕುಂಟೆ ಪ್ರಾಥಮಿಕ ಶಾಲೆ ಮಕ್ಕಳಿಲ್ಲದೆ ಬೀಗ ಹಾಕಿರುವ ಹಿನ್ನಲೆ ಶಾಲೆಯ ಕೊಠಡಿಯಲ್ಲಿರುವ ಪೀಠೋಪಕರಣಗಳು ತುಕ್ಕು ಹಿಡಿದಿರುವುದು ಹಾಗೂ ಶಾಲಾ ಆವರಣ ನಿರ್ವಹಣೆ ಇಲ್ಲದೆ ಸೊರಗುತ್ತಿರುವುದು.

ಚಿತ್ರ ೨೧ ಕೆ.ಎಲ್.ಆರ್. ೦೪ಎ : ಕೃಷ್ಣಮೂರ್ತಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕೋಲಾರ. ರವರ ಭಾವಚಿತ್ರ

ಚಿತ್ರ ೨೧ ಕೆ.ಎಲ್.ಆರ್. ೦೪ಬಿ : ಪಿ.ಆರ್.ಸೂರ್ಯನಾರಾಯಣ, ಜಿಲ್ಲಾ ಕಾರ್ಯದರ್ಶಿ ಪ್ರಾಂತ ರೈತ ಸಂಘ ರವರ ಭಾವಚಿತ್ರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net