ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಕೈಮಗ್ಗ ಮೇಳ

Handloom mela
Published on

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಜ.5ರಿಂದ 18ರವರೆಗೆ ಕೇಂದ್ರ ಕೈಮಗ್ಗ ಅಭಿವೃದ್ಧಿ ನಿಗಮ, ಕೈಮಗ್ಗ, ಜವಳಿ ಸಚಿವಾಲಯದ ಸಂಯುಕ್ತಾಶ್ರಯದಲ್ಲಿ ಸಿಲ್ಕ್ ಫ್ಯಾಬ್ ರೇಷ್ಮೆ ಸೀರೆಗಳು ಮತ್ತು ಕೈಮಗ್ಗ ಉತ್ಪನ್ನಗಳ ವಸ್ತುಪ್ರದರ್ಶನ ಆಯೋಜಿಸಲಾಗಿದೆ ಎಂದು ಉಪ ನಿರ್ದೇಶಕ ಬಿ.ಎಸ್.ಸೋಮಶೇಖರ್ ತಿಳಿಸಿದರು.

ಕೈಮಗ್ಗ ನೇಕಾರರು, ನೇಕಾರರ ಸಹಕಾರ ಸಂಘಗಳಿಗೆ ಹೆಚ್ಚಿನ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ. ಇದರಲ್ಲಿ ದೇಶದ ಸುಮಾರು 60ಕ್ಕೂ ಹೆಚ್ಚು ಕೈಮಗ್ಗ ನೇಕಾರರು ಮತ್ತು ಕುಶಲಕರ್ಮಿಗಳು ಪಾಲ್ಗೊಂಡು ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ. ಈ ವೇಳೆ ದೇಶದ 17ಕ್ಕೂ ಹೆಚ್ಚು ರಾಜ್ಯಗಳ ರೇಷ್ಮೆ ಸೀರೆ ಮತ್ತು ಕೈಮಗ್ಗ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಸಿಗಲಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ರೇಷ್ಮೆ, ಕಾಟನ್ ಸೀರೆಗಳು, ನೆಲ ಹೊದಿಕೆಗಳು, ಬೆಡ್‌ಶೀಟ್‌ಗಳು, ಪರಿಶುದ್ಧ ಕಾಂಜಿವರಂ ಸೀರೆಗಳು, ಬಿಹಾರ್ ಮತ್ತು ಜಾರ್ಖಂಡ್ ರಾಜ್ಯಗಳ ಸೀರೆಗಳು, ಪಶ್ಚಿಮ ಬಂಗಾಳದ ಕಾಂತಾ ಸೀರೆ, ಬಲಚುರಿ ಸೀರೆ, ಬುಟಿಕ್ ಸೀರೆಗಳು ದೊರೆಯಲಿವೆ. ನಿತ್ಯ ಬೆಳಗ್ಗೆ 10 ರಿಂದ ರಾತ್ರಿ 8.30ರವರೆಗೆ ಮೇಳ ಇರಲಿದೆ. ಜ.6ರ ಸಂಜೆ 4 ಗಂಟೆಗೆ ಅಧಿಕೃತವಾಗಿ ಗಣ್ಯರು ಚಾಲನೆ ನೀಡಲಿದ್ದಾರೆ ಎಂದಯ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net