ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್ ಬೆಂಬಲಿಸಿ

23 SARAG 2
Published on

ಸರಗೂರು: ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್ ಪರ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಹಾಗೂ ಸದಸ್ಯರು ಮತಯಾಚಿಸಿದರು.


ತಾಲೂಕಿನ ಇಟ್ನ, ತುಂಬಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ನ, ಹುಲಿಕುರ, ತೊರಹಳ್ಳಿ, ತುಂಬಸೋಗೆ ಗ್ರಾಮದ ಯಜಮಾನರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭಾನುವಾರ ಭೇಟಿ ಮಾಡಿ ಸಮಾಲೋಚಿಸಿದರು.


ನಂತರ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇ ನಮಗೆ ಶೀರಕ್ಷೆ. ಮಾಜಿ ಶಾಸಕ ಚಿಕ್ಕಣ್ಣ ಅವರು ಅವರ ಅವಧಿಯಲ್ಲಿ ತಾಲೂಕಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಇದನ್ನು ಅರಿತು ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್ ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಮತದಾರರು ಬೆಂಬಲ ನೀಡಬೇಕು. ಅವರನ್ನು ಆಯ್ಕೆ ಮಾಡುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

ಆದಿ ಕರ್ನಾಟಕ ಮಹಾಸಭಾ ಪ್ರಧಾನ ಕಾರ್ಯದರ್ಶಿ ಚನ್ನಿಪುರ ಮಲ್ಲೇಶ್, ಮಾಜಿ ಗ್ರಾಪಂ ಅಧ್ಯಕ್ಷ ಹಳೆಹೆಗ್ಗುಡಿಲು ಸೋಮಣ್ಣ, ಸದಸ್ಯ ಮಟದಕಟ್ಟೆ ನಿಂಗರಾಜು, ತುಂಬಸೋಗೆ ನಾಗಣ್ಣ, ಪುಟ್ಟರಾಜು, ಬಿಡಗಲು ಶಿವಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net