ಜೆಡಿಎಸ್ ಬೆಂಬಲಿತ ಸದಸ್ಯರು ಜಯಭೇರಿ

03.. PYP.01
Published on

ಪಿರಿಯಾಪಟ್ಟಣ: ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯರು ಜಯಭೇರಿ ಬಾರಿಸಿದ್ದಾರೆ.
ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಬೆಂಬಲಿತ 11 ನಿರ್ದೇಶಕರು ಜಯಗಳಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.


ಸಾಲಗಾರರಲ್ಲದ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಜೆಡಿಎಸ್ ಬೆಂಬಲಿತ ಸದಸ್ಯರಾದ ಎಚ್.ಬಿ.ಸುರೇಶ್, ಎಚ್.ಬಿ.ರಮೇಶ್, ರಾಮೇಗೌಡ, ಸೈಯದ್ ಜಮೀಲ್, ಬಿ.ಆರ್.ಸತೀಶ್ ಕುಮಾರ್, ಪಿ.ಕೆ.ಕುಮಾರ್, ವಿ.ಆರ್.ವೆಂಕಟೇಶ್, ಗೀತಾ, ಎಸ್.ಜಿ.ನಳಿನಿ, ಶೋಭಾ, ಕರಿನಾಯಕ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯ ರಾಮಕೃಷ್ಣ ಜಯಗಳಿಸಿದ್ದಾರೆ.


ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ಬಿರುಸಿನ ಸ್ಪರ್ಧೆ ನಡೆದಿದ್ದಾದರೂ ಕೊನೆಯಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯರು ಜಯಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜೆಡಿಎಸ್ ಮುಖಂಡರಾದ ಎಸ್.ರಾಮು, ಮಂಜುನಾಥ್ ಸಿಂಗ್, ರಾಮಚಂದ್ರು, ಬಿ.ಶಿವಣ್ಣ, ಗೋಪಾಲ್, ಪಾರೆಕೊಪ್ಪಲು ಚಂದ್ರು, ಶಿವರಾಜು, ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net