ಜೆಡಿಎಸ್ ಸದಸ್ಯರು ಬಿಜೆಪಿಗೆ ಬೆಂಬಲ ಸೂಚಿಸಲು ಮಾಜಿ ಸಚಿವ ಜೀವಿಜಯ ಕಾರಣ: ಕೆ.ಎಂ.ಗಣೇಶ್ ಆರೋಪ

WhatsApp Image 2020-12-04 at 1.31.52 PM
Published on

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಪಿ.ಎ.ಯೂಸೂಪ್, ಜಿಲ್ಲಾ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ರಾಜೇಶ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ವಿಜಯ ಉಪಸ್ಥಿತರಿದ್ದರು.

ಮುಂಬರುವ ಗ್ರಾ.ಪಂ. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ೪೦ರಿಂದ ೪೫ ಗ್ರಾ.ಪಂ.ಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಇದೇ ಸಂದರ್ಭ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಜೀವಿಜಯ ಅವರನ್ನು ನಮ್ಮ ನಾಯಕರೆಂದೇ ಭಾವಿಸಿದ್ದೇವು. ಆದರೆ, ಈಗ ಅವರು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದು, ಜೆಡಿಎಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಜೆಡಿಎಸ್ ಬಿಜೆಪಿಗೆ ಬೆಂಬಲ ಸೂಚಿಸಲಿದೆ ಎಂಬಂತೆ ಬಿಂಭಿಸಲು ಕುಶಾಲನಗರ ಪ.ಪಂ. ಯಲ್ಲಿ ಜೆಡಿಎಸ್ ಸದಸ್ಯರಿಗೆ ಬಿಜೆಪಿಗೆ ಬೆಂಬಲ ಸೂಚಿಸಲು ಜೀವಿಜಯ ಅವರೇ ಹೇಳಿದ್ದಾರೆ. ಈ ಸಂಬಂಧ ವೀಡಿಯೋ ಸಾಕ್ಷಿಗಳು ದೊರೆತಿದ್ದು, ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಡಿಕೇರಿ: ಕುಶಾಲನಗರ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಸದಸ್ಯರು ಬಿಜೆಪಿಗೆ ಬೆಂಬಲ ಸೂಚಿಸಲು ಮಾಜಿ ಸಚಿವ ಜೀವಿಜಯ ಕಾರಣವೆಂದು ಆರೋಪಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಸೂಕ್ತ ಸಮಯದಲ್ಲಿ ಈ ಸಂಬಂಧ ವೀಡಿಯೋ ಬಿಡುಗಡೆಗೊಳಿಸುವುದಾಗಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net