ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ

gkvk - honey bee
Published on

2025-26ನೇ ಸಾಲಿಗೆ ಭಾಗಮಂಡಲ ಹಾಗೂ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 03 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ದಿನಾಂಕ: 04-11-2025 ರಿಂದ 03-02-2026 ರವರೆಗೆ ಆಯೋಜಿಲಾಗಿರುತ್ತದೆ.

 ಮೈಸೂರು ಜಿಲ್ಲೆಗೆ ಪರಿಶಿಷ್ಟ ಜಾತಿ ವರ್ಗದಡಿ 01 ಸಂಖ್ಯೆ ಗುರಿಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಕನಿಷ್ಠ SSLC, ಖಾಲಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ 18 ರಿಂದ 35 ವರ್ಷ ವಯಸ್ಸಿನ ರೈತರ ಮಕ್ಕಳು (ಪುರುಷ ಅಭ್ಯರ್ಥಿ) ಸಂಬoಧಿಸಿದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಯವರನ್ನು ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು ಸಲ್ಲಿಸಬಹುದಾಗಿದೆ.

 ಸಂಪರ್ಕಿ ಬೇಕಾದ ದೂ.ಸಂ: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಮೈಸೂರು:- 0821-2430450, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಹೆಚ್.ಡಿ. ಕೋಟೆ:- 08228-255262, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಹುಣಸೂರು:- 08222-252447, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕೆ.ಆರ್. ನಗರ:- 08223-262792, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ನಂಜನಗೂಡು:- 08221-226201, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಪಿರಿಯಾಪಟ್ಟಣ:- 08223-273535, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಟಿ. ನರಸೀಪುರ:- 08227-260086 ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net