

ಯಳಂದೂರು: ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಗುರುವಾರ ಬೆಳಗ್ಗೆ ಜೋರು ಗಾಳಿಗೆ ದೊಡ್ಡ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಯಿತು.
ಬೆಟ್ಟದಿಂದ ಯಳಂದೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಶೆಟ್ಟರಕಟ್ಟೆ ಬಳಿ ದೊಡ್ಡ ಮರವೊಂದು ರಸ್ತೆಗೆ ಬಿದ್ದಿದೆ. ಅದೃಷ್ಟವಶಾತ್ ಈ ಸಂದರ್ಭದಲ್ಲಿ ಯಾವುದೇ ವಾಹನ ರಸ್ತೆಯಲ್ಲಿ ಇಲ್ಲವಾದ್ದರಿಂದ ಯಾವುದೇ ತೊಂದರೆಯಾಗಿಲ್ಲ. ಆದರೆ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದೇ ಆಗಿರುವುದರಿಂದ ವಾಹನಗಳು ಸಂಚರಿಸದೆ ಟ್ರಾಫಿಕ್ ಜಾಮ್ ಆಗಿತ್ತು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.