

ಚನ್ನರಾಯಪಟ್ಟಣ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು ಶೇ. 100 ಫಲಿತಾಂಶದೊಂದಿಗೆ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಹಿರಿಮೆ ಜ್ಞಾನಸಾಗರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಗೆ ಲಭಿಸಿದೆ.
ಪಟ್ಟಣದ ಜ್ಞಾನಸಾಗರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆ ಪ್ರತಿ ವರ್ಷ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಪ್ರತಿ ವರ್ಷ ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮಾಡುತ್ತಾ ಬಂದಿದ್ದು, ಅದು ಪ್ರಸಕ್ತ ಸಾಲಿಗೂ ಮುಂದುವರಿದಿದೆ. 2024-25ನೇ ಸಾಲಿಗೆ ನಡೆದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಶಾಲೆಯ ವಿದ್ಯಾರ್ಥಿಗಳು ಪ್ರತಿವರ್ಷದಂತೆ ಈ ಬಾರಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಯ ವಿದ್ಯಾರ್ಥಿನಿ ಯು. ಕೆ.ಮೌಲ್ಯಾ ಶೇ.98 ಅಂಕಗಳನ್ನು ಗಳಿಸಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ, ಸಿ.ಯು.ಹೃಷಿಕೇಶ ಶೇ.97.2 ಅಂಕ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಹಾಸನ ಜಿಲ್ಲೆ ಮತ್ತು ಚನ್ನರಾಯಪಟ್ಟಣ ತಾಲೂಕಿಗೆ ಹಾಗೂ ಶಾಲೆಗೆ ಕೀರ್ತಿ ತಂದಿರುತ್ತಾರೆ. 128 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 82 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಉತ್ತಮ ಸಾಧನೆ ಮಾಡಿ ದಾಖಲೆ ಫಲಿತಾಂಶ ನೀಡಿದ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ, ವಿದ್ಯಾರ್ಥಿಗಳ ಸಾಧನೆಗೆ ಶ್ರಮಿಸಿದ ಬೋಧಕ ವೃಂದದವರಿಗೆ ಉತ್ತಮ ಸಾಧನೆ ಮಾಡಿ ಶಾಲೆ ಹೆಮ್ಮೆ ಪಡುವಂತೆ ಮಾಡಿದ ಸಾಧಕರನ್ನು ನಾಗೇಶ್ ಎಜುಕೇಷನ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಡಾ.ಕೆ.ನಾಗೇಶ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಭಾರತಿನಾಗೇಶ್, ಡೀನ್ ಡಾ.ಸುಜಾ ಫಿಲಪ್, ಆಡಳಿತಾಧಿಕಾರಿ ಸಿ.ಪಿ.ಫಿಲಿಫ್ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.