ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ : ಬಿ.ಶ್ರೀನಿವಾಸ್

ksrtc dc
Published on

ಬನ್ನಿಮಂಟಪದಲ್ಲಿರುವ ಸಾರಿಗೆ ಸಂಸ್ಥೆ ಡಿಪೋ ಸಮೀಪ ಕೆಎಸ್‌ಆರ್‌ಟಿಸಿಗೆ ಸೇರಿದ ಜಾಗವಿದ್ದು, ಅದರಲ್ಲಿ ನೆಲ್ಸನ್ ಮಂಡೇಲಾ ರಸ್ತೆಗೆ ಹೊಂದಿಕೊಂಡಂತೆ ಇರುವ ಜಾಗದಲ್ಲಿ ಹೊಸದಾಗಿ ಗ್ರಾಮಾಂತರ ಬಸ್ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಸಂಸ್ಥೆ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್ ತಿಳಿಸಿದ್ದಾರೆ.

ಬಸ್ ಡಿಪೋ ಬಳಿ 14 ಎಕರೆ ಜಾಗದಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಿಸಲು ಡಿಪಿಆರ್ ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ದೊರೆತಿದೆ.

ಯೋಜನೆ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಯೋಜನೆಗೆ ಕೆಲವರು ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನುವುದು ಮಾತ್ರ ಅರ್ಥ ಆಗುತ್ತಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net