

ರಾಮಕೃಷ್ಣನಗರದ ಸಿದ್ದಾರ್ಥ ಕ್ಷೇಮಾಭಿವೃದ್ಧಿ ಸಂಘ ಹಾಗೂ ಇತರೆ ಸಂಘಗಳ ಸಂಯುಕ್ತಾಶ್ರಯದಲ್ಲಿ ಮೇ 26ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಹಿರಿಯಣ್ಣ ಹೇಳಿದರು.
ಕುವೆಂಪುನಗರದಲ್ಲಿರುವ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಅಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಉರಿಲಿಂಗಪೆದ್ದಿ ಮಠದ ಶ್ರೀ ಸ್ವಾಮೀಜಿ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು. ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಶಾಸಕ ಎ.ಆರ್.ಕೃಷ್ಣಮೂರ್ತಿ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಂ.ವಿ.ಚಂದ್ರಶೇಖರ್ ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದೇ ವೇಳೆ ಗೌತಮ ಸಹಕಾರಿ ಆಸ್ಪತ್ರೆ ಸಂಸ್ಥಾಪಕ ಅಧ್ಯಕ್ಷ ಡಾ.ಎಸ್.ರಂಗನಾಥಯ್ಯ, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿವೃತ್ತ ನಿರ್ದೇಶಕಿ ಡಾ.ಬಿ.ಎಸ್. ಪುಪ್ಪಲತಾ ಕೆ.ಅಪ್ಪಾಜಿ ಅವರನ್ನು ಸನ್ಮಾನಿಸಲಾಗುವುದು. ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ.96 ರಷ್ಟು ಅಂಕ ಗಳಿಸಿರುವ ಚಾಮರಾಜನಗರ ಜಿಲ್ಲೆಯ ಸೋಮವಾರಪೇಟೆಯ ಅಪೇಕ್ಷಾ, ಎಸ್‌ಎಸ್‌ಎಲ್‌ಸಿ ಶೇ.98ರಷ್ಟು ಅಂಕಗಳಿಸಿದ ರಾಮಕೃಷ್ಣನಗರದ ಪ್ರಜ್ಞಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಆರ್.ಸಿ.ಸಿದ್ದರಾಜು, ಮಲ್ಲಿಕಾರ್ಜುನ್, ಕೆ.ಅಪ್ಪಾಜಿ, ಪುಷ್ಪಕುಮಾರ್, ಎಸ್.ಚೌಡಯ್ಯ, ಶಿವಮಲ್ಲು ಇದ್ದರು.