ಚಾಮರಾಜನಗರ: ಜಿಲ್ಲಾಮಟ್ಟದ ವಿಕಲಚೇತನ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.19 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಕಲಚೇತನರು ಈ ಸಭೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ 08226-223688, 224688 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.